ಬಂಟ್ವಾಳ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.)ಬಂಟ್ವಾಳ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಿಸಿರೋಡು ವಲಯದ ವತಿಯಿಂದ ನ.17 ರಂದು ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಬಿಸಿರೋಡು ವಲಯ ಮೇಲ್ವಿಚಾರಕ ಕೇಶವ ಅವರು ಪ್ರಕಟನೆ ತಿಳಿಸಿದ್ದಾರೆ.
ಬೆಳಿಗ್ಗೆ 7.30 ರಿಂದ ಶ್ರೀ ರಾಧಾಕೃಷ್ಣ ಭಟ್ ಅವರ ಪೌರೋಹಿತ್ಯ ದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ಬೆಳಿಗ್ಗೆ 10.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತ್ಯನ್ಯಾಂದ ಸ್ವಾಮೀಜಿ ಅವರು ಆಶೀವರ್ಚನ ನೀಡಲಿದ್ದಾರೆ.
ಬಂಟ್ವಾಳ ತಾಲೂಕಿನ ತಹಶೀಲ್ದಾರ್ ರಶ್ಮಿ ಎಸ್. ಅರ್ ಕಾರ್ಯಕ್ರಮ ವನ್ನು ಉದ್ಘಾಟಿಸಲಿದ್ದು, ಉಡುಪಿಯ ಖ್ಯಾತ ವಕೀಲೆ, ವಾಗ್ಮಿ ಸಹನಾ ಕುಂದರ್ ಧಾರ್ಮಿಕ ಉಪನ್ಯಾಸ ಮಾಡಲಿದ್ದು, ಬಂಟ್ವಾಳ ಭೂಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಲಿದ್ದಾರೆ, ಅನೇಕ ಗಣ್ಯರು ಕಾರ್ಯಕ್ರಮದ ಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.














