Friday, June 27, 2025

ಕೊರೊನಾ ಹತೋಟಿ ಜಾಗೃತಿ ವೇಳೆ ಕರ್ತವ್ಯ ಅಧಿಕಾರಿಗೆ ದಾಳಿ ಖಂಡನೀಯ: ಪ್ರಭಾಕರ ಪ್ರಭು

ವಿಟ್ಲ: 144 ಸೆಕ್ಷನ್ ಜಾರಿಯಲ್ಲಿರುವ ಸಂದರ್ಭದಲ್ಲಿ ಕೊಳ್ನಾಡು ಪರಿಸರದಲ್ಲಿ ಗುಂಪು ಸೇರಿದ ಜನರನ್ನು ಚದುರಿಸಲು ಹೋದ ಸರಕಾರಿ ಅಧಿಕಾರಿಯ ಮೇಲೆ ನಡೆದ ದಾಳಿ ಹಾಗೂ ಜೀವಬೆದರಿಕೆ ಖಂಡನೀಯ ಪ್ರಕರಣ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಬಲವಾಗಿ ಆರೋಪಿಸಿದ್ದಾರೆ.

ಸರಕಾರಿ ಅಧಿಕಾರಿಗಳು ಕರ್ತವ್ಯದ ವೇಳೆ ಈ ರೀತಿಯಲ್ಲಿ ಅಮಾನವೀಯ ರೀತಿಯಲ್ಲಿ ವರ್ತನೆ ಸರಿಯಲ್ಲ ಇಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಇಂತಹ ಘಟನೆಗಳು ಜಿಲ್ಲೆಯ ಲ್ಲಿ ಮತ್ತೆ ಮತ್ತೆ ಮರುಕಳಿಸಲು ತಾವೇ ಪ್ರಚೋದನೆ ನೀಡಿದಂತಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೊರೊನಾ ಹತೋಟಿಗೆ ಬರುವವರೆಗೆ ಎಲ್ಲಾ ಅಧಿಕಾರಿಗಳು ಸೇರಿದಂತೆ, ಮುಖ್ಯವಾಗಿ ಪೋಲೀಸ್ ಇಲಾಖೆ, ಸರಕಾರದೊಂದಿಗೆ ಪಣತೊಡಬೇಕಾಗಿದೆ.
ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ಎ.14 ರವರೆಗಿನ ಜನತಾಕರ್ಪ್ಯೂ ಗೆ ಬೆಂಬಲ ನೀಡಬೇಕು. ಈ ಹಿನ್ನೆಲೆಯಲ್ಲಿ ಸರಕಾರಿ ಇಲಾಖಾ ಅಧಿಕಾರಿಗಳೊಂದಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ವಿನಂತಿ ಮಾಡಿದ್ದಾರೆ.

ಘಟನೆಯ ವಿವರ: ಜಾಗದ ತಕರಾರು ಬಗೆಹರಿಸಲು ಹೋದ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರ ಮೇಲೆ ದಾಳಿ ಮಾಡಿದ್ದೂ ಅಲ್ಲದೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಕೊಳ್ನಾಡು ಗ್ರಾಮದ ತಾಳಿತ್ತನೂಜಿಯಲ್ಲಿ ಬುಧವಾರ ನಡೆದಿದೆ.

ವಿಟ್ಲ ಹೋಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳ್ಯ ಅವರ ಮೇಲೆ ಕೋಡಪದವು ನಿವಾಸಿ ಇಸುಬು ಎಂಬಾತ ಗುಂಪು ಕಟ್ಟಿಕೊಂಡು ದಾಳಿಯನ್ನು ನಡೆಸಿದ್ದಾನೆ. ಕಲಂ144 ಜಾರಿಯಲ್ಲಿರುವ ಸಮಯದಲ್ಲಿ ಗುಂಪು ಸೇರಿಕೊಂಡು ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಸಂದರ್ಭ ದಾಳಿಯನ್ನು ನಡೆಸಿ ಗಾಯಗೊಳಿಸಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...