Monday, January 26, 2026

ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ. 2021-22 ನೇ ಸಾಲಿನಲ್ಲಿ 1.09 ಕೋಟಿ ಲಾಭ :ಪ್ರಭಾಕರ ಪ್ರಭು

 

ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು 2021-22 ನೇ ಸಾಲಿನಲ್ಲಿ 293.14 ಕೋಟಿ ವ್ಯವಹಾರ ನಡೆಸಿದ್ದು, 1.09 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ತಿಳಿಸಿದ್ದಾರೆ. ಈ ಕುರಿತಾಗಿ ಪತ್ರಿಕಾ ಪ್ರಕಟಣೆಯಲ್ಲಿ ವಿವರಣೆ ನೀಡಿರುವ ಅವರು, ಸಂಘದ ಠೇವಣಿಯನ್ನು 39.49 ಕೋ.ರೂ.ಗೆ ಹೆಚ್ಚಿಸಲಾಗಿದ್ದು, 62.86 ಕೋ.ರೂ. ಸಾಲ ಹೊರಬಾಕಿ ಇರುತ್ತದೆ, ಹೂಡಿಕೆ 6.27 ಕೋ.ರೂ.ನಿಂದ 9.49 ಕೋ.ರೂ.ಗೆ ಏರಿಕೆ ಕಂಡಿದ್ದು, ದುಡಿಯುವ ಬಂಡವಾಳ 48.68 ಕೋ.ರೂ.ನಿಂದ 77.92 ಕೋ.ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಆಡಿಟ್ ವರ್ಗೀಕರಣದಲ್ಲಿಯು ‘ಎ’ ತರಗತಿ ಪಡೆದಿದ್ದು, 2021-22 ನೇ ಸಾಲಿನಲ್ಲಿ 275 ಮಂದಿ ಹೊಸ ಸದಸ್ಯರು ಸೇರ್ಪಡೆಯಾಗಿದ್ದು,2.22 ಕೋ.ರೂ.ಪಾಲು ಬಂಡವಾಳ ಜಮೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುವ ಅಧ್ಯಕ್ಷ ಪ್ರಭು ರವರು
ಸಂಘದ ಸದಸ್ಯರ ಅವಶ್ಯಕತೆಗನುಗುಣವಾಗಿ ಒಟ್ಟು 68.55 ಕೋ.ರೂ. ಸಾಲ ವಿತರಿಸಲಾಗಿದೆ.ಈ ಪೈಕಿ 1687 ರೈತ ಸದಸ್ಯರಿಗೆ 32.09 ಕೋ.ರೂ. ಬೆಳೆಸಾಲ, 1054 ರೈತ ಸದಸ್ಯರಿಗೆ 36.46 ಕೋ.ರೂ. ಕೃಷಿ ಅಭಿವೃದ್ದಿ ಸಾಲ ಸಹಿತ ಇನ್ನಿತರ ಸಾಲ ವಿತರಿಸಲಾಗಿದೆ ಎಂದು ವಿವರಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನ್ವಯ 1556 ಎಕ್ರೆ ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಸುಮಾರು ರೂ 41 ಲಕ್ಷ ಹಣವನ್ನು ರೈತರಿಂದ ಪ್ರೀಮಿಯಂ ಪಾವತಿಸಲಾಗಿದೆ.
ಸಂಘದಲ್ಲಿ ಪಡಿತರ ಸಾಮಾಗ್ರಿ, ರಾಸಾಯನಿಕ ಗೊಬ್ಬರ, ಕೀಟನಾಶಕ, ಮೈಲುತುತ್ತು, ಸುಣ್ಣ, ಸೇರಿದಂತೆ ಇನ್ನಿತರ ಗೃಹೋಪಯೋಗಿ ವಸ್ತುಗಳ ಮಾರಾಟ ಮಾಡಲಾಗುತ್ತಿದೆ. ಸಿದ್ಧಕಟ್ಟೆ ಪ್ರಧಾನ ಕಛೇರಿಯ ಬಳಿ ಎಮ್. ಎಸ್. ಸಿ. ಯೋಜನೆಯಡಿಯಲ್ಲಿ ರೂ. 1 ಕೋಟಿ ವೆಚ್ಚದಲ್ಲಿ ಗೋದಾಮು ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ.
ಸಂಘದ ರಾಯಿ ಶಾಖಾ ಕಚೇರಿಯು ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವುದಾಗಿದೆ.
.ಸಂಘದ ಆರಂಬೋಡಿ ಶಾಖೆ ಆರಂಬೊಡಿ ಗ್ರಾಮ ಪಂಚಾಯತ್ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ.
ಎರಡು ಶಾಖಾ ಕಛೇರಿಗಳು ಉತ್ತಮ ವ್ಯವಹಾರ ನಡೆಸುತ್ತಿವೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಉಳಿಪಾಡಿ ಇವರ ಶಿಫಾರಸ್ಸು ಮೇರೆಗೆ ಕೃಷಿ ಇಲಾಖೆಯಿಂದ ಪಡೆದಿರುವ ಎರಡು ಟ್ರಾಕ್ಟರ್ ಗಳನ್ನು ಹಡಿಲು ಬಿದ್ದ ಗದ್ದೆಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಹಿರಿಯರ ಮಾರ್ಗದರ್ಶನ, ಸದಸ್ಯರ ಸಹಕಾರ ದಿಂದ ಸಂಘ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ
ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಸಂಘದಲ್ಲಿ ಸತೀಶ್ ಪೂಜಾರಿ ಅಲಕ್ಕೆ ಉಪಾಧ್ಯಕ್ಷರಾಗಿ ಉಳಿದಂತೆ ನಿರ್ದೇಶಕರಾಗಿ ಪದ್ಮರಾಜ್ ಬಲ್ಲಾಳ್ ಮಾವಂತೂರು, ಸಂದೇಶ್ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಹರೀಶ್ ಆಚಾರ್ಯ ರಾಯಿ, ದಿನೇಶ್ ಪೂಜಾರಿ ಹುಲಿಮೇರು,ಉಮೇಶ್ ಗೌಡ, ಜಾರಪ್ಪ ನಾಯ್ಕ, ವೀರಪ್ಪ ಪರವ, ದೇವರಾಜ್ ಸಾಲ್ಯಾನ್, ಅರುಣಾ ಎಸ್. ಶೆಟ್ಟಿ, ಮಂದಾರತಿ ಎಸ್.ಶೆಟ್ಟಿ, ಹಾಗೂ ವೃತ್ತಿಪರ ನಿರ್ದೇಶಕರಾಗಿ ಮಾಧವ ಶೆಟ್ಟಿಗಾರ್, ಕೇಶವ ಕಿಣಿ ಸೇವೆ ಸಲ್ಲಿಸುತ್ತಿದ್ದಾರೆ.
ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಆರತಿ ಶೆಟ್ಟಿ ಯವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

 

ಸೆಪ್ಟೆಂಬರ್ 24 ಕ್ಕೆ ಮಹಾಸಭೆ:

ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.24 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಪ್ರಧಾನ ಕಛೇರಿ ಸಭಾಂಗಣದಲ್ಲಿ ಜರಗಲಿರುವುದು ಎಂದು ಅವರು ತಿಳಿಸಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...