ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೋ ಹತ್ಯೆಯನ್ನು ಒಳಗೊಂಡು ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿರುವ ವಿಷಯಗಳ ಕುರಿತಂತೆ ಈಗಿರುವ ಕಾನೂನು ಬಲಪಡಿಸುವ ಜತೆಗೆ ಹೊಸ ಕಾನೂನು ತರಲಾಗುವುದು ಎಂದು ಅವರು ಹೇಳಿದರು.
ಕಾನೂನು ಪ್ರಕಾರ ಏನೇ ನಡೆದರೂ ನಾವು ಮಾತನಾಡುವುದಿಲ್ಲ. ಆದರೆ ಉಲ್ಲಂಘನೆ ಆದರೆ ಬಿಡುವುದಿಲ್ಲ. ಗೋ ಸಾಗಾಟದ ಹೆಸರಿನಲ್ಲಿ ಪೊಲೀಸ್‌ಗಿರಿ ಮಾಡಬಾರದು. ಅಕ್ರಮಗಳು ನಡೆಯುತ್ತಿದ್ದರೆ ಅನ್ನು ಪೊಲೀಸರಿಗೆ ತಿಳಿಸಿ, ಕಾನೂನುಕೈಗೆತ್ತಿಕೊಳ್ಳಬೇಡಿ ಎಂದರು.

