Thursday, January 29, 2026

*ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ*  *ಕಠಿಣ ಕ್ರಮಕ್ಕೆ : ಅಭಾವಿಪ ಆಗ್ರಹಿಸಿ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ*

ಮಂಗಳೂರು ಫೆ.28: ಶಿಕ್ಷಣ ಕ್ಷೇತ್ರದಲ್ಲಿ ಇಡಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂದು ಹೆಗ್ಗಳಿಕೆ ನಮ್ಮೆಲರಿಗೂ ಇದೆ. ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದೆಲ್ಲೆಡೆ ಹೋರಾಟ ನಡೆಸಿ ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಿಸಿತ್ತು. ಆದರೆ ಇದೀಗ ಕರ್ನಾಟಕದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸಿಟ್ ಬ್ಲಾಕಿಂಗ್ ದಂಧೆಯನ್ನು ಸಾಕ್ಷಿ ಸಮೇತವಾಗಿ ಐಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. ಸೀಟುಗಳ ಮಾರಾಟದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಜೊತೆಗೆ ಆದಾಯ ತೆರಿಗೆ ಇಲಾಖೆಯ ಕಾಯ್ದೆಯೂ ಕೂಡ ಇಲ್ಲಿ ಉಲ್ಲಂಘನೆ ಆಗಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ದ ಸರ್ಕಾರ ಯಾವುದೇ ಒತ್ತಡಗಳಿಗೆ ಮಣಿಯದೆ ಕಠಿಣ ಕ್ರಮ ತೆಗೆದುಕೊಳ್ಳಲು ಆಗ್ರಹಿಸುತ್ತದೆ.

ಈ ಹೋರಾಟದ ನೇತೃತ್ವವನ್ನು ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ , ನಗರ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ, ರಾಷ್ಟ್ರೀಯ ಕಾರ‍್ಯಕಾರಿಣಿ ಸದಸ್ಯೆ ದೀಪ್ತಿ , ನಗರ ಸಹಕಾರ್ಯದರ್ಶಿ ಕಿರಣ್, ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀಲಕ್ಷ್ಮೀ , ಹೋರಾಟ ಪ್ರಮುಖ್ ಪ್ರಣಮ್, ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ ಪ್ರಮುಖರಾದ ಚೇತನ್, ವಿಕ್ಯಾತ್, ಆದರ್ಶ್, ಧರಣಿಶ್,ಭವನೀಶ್ ಶೆಟ್ಟಿ, ವರುಣ್, ಕೀರ್ತನ್, ಸುಶಾಂತ್, ಸಂತೋಷ್ ಬರ್ಕೆ, ಶ್ರಾವ್ಯ, ಕುಶಾಲ್ , ಹರ್ಷಿತ್ ವಹಿಸಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...