Thursday, February 13, 2025

ಜು.3ಕ್ಕೆ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ

ಬಂಟ್ವಾಳ: ವಿಶ್ವ ಹಿಂದು ಪರಿಷತ್ ,ಬಜರಂಗದಳ ಹಾಗೂ ಹಿ.ಜಾ.ವೇ. ವಿಟ್ಲ ಹಾಗೂ ಬಂಟ್ವಾಳ ಪ್ರಖಂಡ ಬಂಟ್ವಾಳ ತಾಲೂಕು ಇದರ ಜಂಟಿ ಆಶ್ರಯದಲ್ಲಿ ಗೋಹತ್ಯೆ, ಗೋಕಳ್ಳತನ,  ಗೋಸಾಗಾಟ, ಅಕ್ರಮ ಕಸಾಯಿಖಾನೆಯ ವಿರುದ್ಧ ಬೃಹತ್ ಪ್ರತಿಭಟನೆಯು ಜು.3 ರಂದು ಬಿ.ಸಿ ರೋಡ್ ನ  ಮಿನಿವಿಧಾನಸೌಧದ  ಮುಂಭಾಗದಲ್ಲಿ ಬೆಳಿಗ್ಗೆ 10 ರಿಂದ 12 ರ ತನಕ ನಡೆಯಲಿದೆ.                                              ರೈತರ ಜೀವ ಸೆಲೆ ಗೋವು ಕೃಷಿಕನಿಂದು ಗೋವಿನ ಗೊಬ್ಬರಕ್ಕಾಗಿ ಪರಿತಪಿಸುತ್ತಿದ್ದಾನೆ. ಗೋವು ಇಲ್ಲದೆ ಕೃಷಿಕನಿಲ್ಲ. ಇಂತಹ ಅಳಿವು ಉಳಿವಿನ ಈ ಕಾಲಘಟ್ಟದಲ್ಲಿ ಗೋ ಸಂತತಿಯ ನಾಶಕ್ಕಾಗಿ ಪಣತೊಟ್ಟ ಗೋಕಳ್ಳರಿಂದ ಗೋವನ್ನು ರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು  ಜಿಲ್ಲಾ ಗೋರಕ್ಷಾ ಪ್ರಮುಖ್ ಸರಪಾಡಿ ಆಶೋಕ್ ಶೆಟ್ಟಿ ಮತ್ತು ಹಿ.ಜಾ.ವೇ.ಯ ಪುತ್ತೂರು ಜಿಲ್ಲಾ ಅಧ್ಯಕ್ಷ ರತ್ನಾಕರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಜಿಲ್ಲಾಡಳಿತ, ಪೋಲಿಸ್ ಇಲಾಖೆ ಕರ್ತವ್ಯ ಮೆರೆದು ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಯನ್ನು ಗುರುತಿಸಿ ಗೋ ಹಂತಕರನ್ನು ಕಾನೂನಿನ ಕುಣಿಕೆಯ ಮೂಲಕ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಬೇಕು. ಜಿಲ್ಲೆಯಲ್ಲಿ ಗೋವು ಸಂತತಿ ಭಯಮುಕ್ತವಾಗಿ ಬದುಕಬೇಕು. ಕೃಷಿಕ ರಾತ್ರಿ ಸುಖ ನಿದ್ದೆ ಮಾಡಬೇಕು.  ಹಾಗಾದಾಗ ನಮ್ಮ ಜಿಲ್ಲೆ ಶಾಂತಿಯ ನಾಡಾಗಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಅಕ್ರಮ ಕೃತ್ಯದಲ್ಲಿ ತೊಡಗಿದವರನ್ನು ಪತ್ತೆ ಹಚ್ಚದಿದ್ದಲ್ಲಿ ಪರಿವಾರ ಸಂಘಟನೆಯ ಕಾರ್ಯಕರ್ತರು ಈ ಕೆಲಸಕ್ಕೆ ಇಳಿಯಬೇಕಾಗಬಹುದು ಎಂದು ಎಚ್ಚರಿಸಿರುವ ಅವರು ಗೋವು  ನಮ್ಮ  ಸರ್ವಸ್ವವಾಗಿದ್ದು ,ಇದರ ಉಳಿವಿಗಾಗಿ ತಾಲೂಕಿನ ಸಮಾನ ಮನಸ್ಕರು  ಈ ಬೃಹತ್ ಪ್ರತಿಭಟನೆಯಲ್ಲಿ  ಕೈ ಜೋಡಿಸುವಂತೆ ಪ್ರಕಟಣೆಯ ಮನವಿ ಮಾಡಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...