Thursday, February 13, 2025

ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಪ್ರಕರಣ : ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಹಿನ್ನೆಲೆಯಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನ ಟೌನ್‌ ಹಾಲ್‌ ಮುಂದೆ ಪ್ರತಿಭಟನೆ ನಡೆಸಿದ ಪ್ರಕರಣ ಸಂಬಂಧ ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣ ರದ್ದು ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ| ಕೃಷ್ಣ ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಆದೇಶವನ್ನು ನೀಡಿದೆ.

ಕಾನೂನು ಪ್ರಕಾರ ಆದೇಶ ಹೊರಡಿಸಿದ ಅಧಿಕಾರಿ ಅಥವಾ ಅವರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ದೂರು ದಾಖಲಿಸಬೇಕಿದೆ. ಈ ಪ್ರಕರಣದಲ್ಲಿ ಇನ್‌ಸ್ಪೆಕ್ಟರ್‌ ಖಾಸಗಿ ದೂರು ದಾಖಲಿಸಿರುವುದು ಮತ್ತು ಆ ದೂರು ಪರಿಗಣಿಸಿ ಅರ್ಜಿದಾರರಿಗೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಕ್ರಮ ಜರುಗಿಸಿರುವುದು ಕಾನೂನುಬಾಹಿರ ಎಂಬ ಅರ್ಜಿದಾರರ ಪರ ವಕೀಲರ ವಾದ ಮಾನ್ಯ ಮಾಡಿದ ನ್ಯಾಯಾಲಯ ಸೂಲಿಬೆಲೆ ವಿರುದ್ಧದ ಪ್ರಕರಣವನ್ನು ರದ್ದು ಗೊಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್‌ ಶ್ಯಾಮ್‌, ಫ್ರೀಡಂ ಪಾರ್ಕ್‌ ಹೊರತುಪಡಿಸಿ ಬೆಂಗಳೂರಿನ ಇತರ ಭಾಗದಲ್ಲಿ ಪ್ರತಿಭಟನೆ ನಡೆಸಬಾರದೆಂದು ಆದೇಶವಿದೆ. ಈ ಆದೇಶ ಉಲ್ಲಂಘಿಸಿ ಮತ್ತು ಪೂರ್ವಾನುಮತಿ ಪಡೆಯದೇ ಬೆಂಗಳೂರಿನ ಟೌನ್‌ಹಾಲ್‌ ಮುಂದೆ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ ಭಂಗ ಉಂಟು ಮಾಡಿದ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಸ್‌.ಜೆ.ಪಾರ್ಕ್‌ ಠಾಣೆಯ ಇನ್‌ಸ್ಪೆಕ್ಟರ್‌ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ ದಾರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಆದರೆ, ನಿಯಮದ ಪ್ರಕಾರ ಇನ್‌ಸ್ಪೆಕ್ಟರ್‌ಗೆ ದೂರು ದಾಖಲಿಸುವ ಅಧಿಕಾರವಿಲ್ಲ. ಹಾಗಾಗಿ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದರು.

 

ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ 2022ರ ಜು.28ರಂದು ಟೌನ್‌ ಹಾಲ್‌ ಮುಂಭಾಗ ಹಿಂದೂ ಹಿತರಕ್ಷಣ ಸಮಿತಿ ಮತ್ತು ಇತರೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಜೆಹಾದಿಗಳಿಗೆ ಧಿಕ್ಕಾರ, ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು. ಪ್ರವೀಣ್‌ ನೆಟ್ಟಾರ್‌ ಹಂತಕರನ್ನು ಸಾರ್ವಜನಿಕವಾಗಿ ಎನ್‌ಕೌಂಟರ್‌ ಮಾಡಬೇಕು’ ಎಂದು ಘೋಷಣೆ ಕೂಗಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...