Sunday, January 25, 2026

ಮಾ.‌19-21: ಬಿ.ವಿ.ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’  ‘ಚಾಣಕ್ಯ ಪ್ರಪಂಚ’, ‘ಹಕ್ಕೀ ಕತೆ’, ‘ಅಬ್ಬಲಿಗೆ’ ನಾಟಕಗಳ ಪ್ರದರ್ಶನ 

ಬಂಟ್ವಾಳ: ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಬಿ.ವಿ.ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ ಮಾ. 19ರಿಂದ 21ರ ವರೆಗೆ ಮಂಚಿ ನೂಜಿಬೈಲು ಅನುದಾನಿತ ಹಿ.ಪ್ರಾ. ಶಾಲೆಯ ವಠಾರದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ.ರಾಮಚಂದ್ರ ಭಟ್ ತಿಳಿಸಿದರು.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.19ರಂದು ಸಂಜೆ 6:30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ವಿಟ್ಲ ಜೂನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ಅನಂತಕೃಷ್ಣ ಹೆಬ್ಬಾರ್ ಉದ್ಘಾಟಿಸಲಿದ್ದು, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವ ಕೊಂಕಣಿ ಕೇಂದ್ರ ಅಧ್ಯಕ್ಷ ಬಸ್ತಿ ವಾಮನ ಶೆಣೈ, ಬಂಟ್ವಾಳ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಮೋಹನ್ ರಾವ್,‌ ಮಂಚಿ ನೂಜಿಬೈಲ್ ಅನುದಾನಿತ ಹಿ.ಪ್ರಾ. ಶಾಲೆಯ ಸಂಚಾಲಕ ಶಾಂತಲಾ‌ ಎನ್. ಭಟ್ ನೂಜಿಬೈಲ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ 7 ಗಂಟೆಗೆ ಕೆ.ವಿ.ಸುಬ್ಬಣ್ಣ ರಚನೆಯ, ಬಿ.ಆರ್.ವೆಂಕಟರಮಣ ಐತಾಳರ ನಿರ್ದೇಶನದಲ್ಲಿ ಶಿವಮೊಗ್ಗ ರಂಗಾಯಣ ಅಭಿನಯಿಸುವ ‘ಚಾಣಕ್ಯ ಪ್ರಪಂಚ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ಹೇಳಿದರು.

ಮಾ.20ರಂದು ಸಂಜೆ 7 ಗಂಟೆಗೆ ಗಣೇಶ ಮಂದಾರ್ತಿ ಹಾಗೂ ಶ್ರವಣ್ ಹೆಗ್ಗೋಡು ನಿರ್ದೇಶನದಲ್ಲಿ ನಾ.‌ ಡಿ.ಸೋಜರವರ ಕಾದಂಬರಿ ಆಧಾರಿತ, ಎಸ್.ಮಾಲತಿಯವರ ರಂಗರೂಪಕ ಆಧಾರಿತ, ಶಿವಮೊಗ್ಗ ರಂಗಾಯಣ ಅಭಿನಯಿಸುವ ‘ಹಕ್ಕೀ ಕತೆ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.

ಮಾ.21ರಂದು ಸಂಜೆ 6:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಅಜೆಕಳ ಗಿರೀಶ್ ಭಟ್ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ, ನ್ಯಾಯವಾದಿ ಶಶಿರಾಜ ಕಾವೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಹಾಯಕ ನಿರ್ದೇಶಕ ರಾಜೇಶ್ ಜಿ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 7 ಗಂಟೆಗೆ ಕಿನ್ನರ ಮೇಳ, ತುಮುರಿ ಅಭಿನಯಿಸುವ ಯಶವಂತ ಚಿತ್ತಾಲರ ‘ಅಬೋಲಿನ್’ ಕಥೆ ಆಧಾರಿತ, ಕೆ.ಜಿ.ಕೃಷ್ಣ ಮೂರ್ತಿ ಅವರು ರಂಗ ರೂಪಾಂತರಗೊಳಿಸಿ ನಿರ್ದೇಶಿಸಿರುವ ‘ಅಬ್ಬಲಿಗೆ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಂಚಿ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಜೊತೆ ಕಾರ್ಯದರ್ಶಿ ಎನ್.ರಮಾನಂದ, ಸದಸ್ಯ ನ್ಯಾಯವಾದಿ ರವೀಂದ್ರ ಕುಕ್ಕಾಜೆ ಉಪಸ್ಥಿತರಿದ್ದರು.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...