Thursday, January 29, 2026

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಮಾಣಿ ವಲಯದ ಶೌರ್ಯ ತಂಡದ ಸದಸ್ಯರು ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣು ಹಂಪಲುಗಳ ಗಿಡಗಳನ್ನು ನೆಡುವುದರೊಂದಿಗೆ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಮಾತನಾಡಿ ಹಸಿರು ನಮ್ಮೆಲ್ಲರ ಉಸಿರು ಮುಂದಿನ ಪೀಳಿಗೆಗೆ ಮರ-ಗಿಡಗಳನ್ನು ಬೆಳೆಸಿ ಪೋಷಿಸುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವೆಂದು ಎಂದರು.

ಈ ಸಂದರ್ಭದಲ್ಲಿ ಪರಿಸರ ಬಗ್ಗೆ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಣಿ ವಲಯದ ಶೌರ್ಯ ತಂಡದ ಸಂಯೋಜಕ ಸತೀಶ್, ಶಾಲಾ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಹರೀಶ್ ಕುಲಾಲ್, ಶೌರ್ಯ ತಂಡದ ಸದಸ್ಯರುಗಳು, ಒಕ್ಕೂಟ ಸೇವಾ ಪ್ರತಿನಿಧಿ ಪುಷ್ಪ,ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ರಮೇಶ್ ಸ್ವಾಗತಿಸಿ, ಶಿಕ್ಷಕಿ ದೀಕ್ಷಾ ವಂದಿಸಿ, ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಐಸಮ್ಮರವರು ಸಹಕರಿಸಿದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...