ಬೆಳ್ತಂಗಡಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಮೇರೆಗೆ ಫೆ. 10 ರಿಂದ ಬೆಳ್ತಂಗಡಿಯಲ್ಲಿ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.


ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರತಿಭಟನೆಗೆ ಅಧಿಕಾರಿಗಳು ಮುಂದಾಗಿದ್ದಾರೆ.