Tuesday, January 27, 2026

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ ಸಮಸ್ಯೆ ಬಗೆಹರಿಸಲು ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

 

ಅವರು ಬಂಟ್ವಾಳ ಬಿಜೆಪಿ ವತಿಯಿಂದ ಬಿ.ಸಿ.ರೋಡಿನಲ್ಲಿ ಕೆಂಪುಕಲ್ಲು ಹಾಗೂ ಮರಳಿನ ಅಭಾವಕ್ಕೆ ಕಾರಣವಾದ ರಾಜ್ಯ ಸರಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಕಾರ್ಮಿಕರಿಗೆ ಕೆಲಸ ಇಲ್ಲದೇ ಇದ್ದಾಗ ಅದು ಜಿಲ್ಲೆಯ ಕಾನೂನು ಸುವ್ಯವಸ್ಥೆಗೂ ತೊಂದರೆಯಾಗುವ ಆತಂಕವಿರುತ್ತದೆ. ಜಿಲ್ಲೆಯ ಗಣಿ ಇಲಾಖೆಗೆ ಸರಿಯಾದ ಅಽಕಾರಿಗಳನ್ನು ನೇಮಿಸುವುದು ಕೂಡ ಸರಕಾರದಿಂದ ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಬಂಟ್ವಾಳ ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ, ರಾಜ್ಯ ವಕ್ತಾರ ವಿಕಾಸ್ ಪುತ್ತೂರು, ಮಹಿಳಾ ಮುಖಂಡೆ ಸುಲೋಚನಾ ಜಿ.ಕೆ.ಭಟ್ ಪ್ರತಿಭಟನೆಯಲ್ಲಿ ಮಾತನಾಡಿದರು.

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿ.ಪಂ.ಮಾಜಿ ಸದಸ್ಯರಾದ ರವೀಂದ್ರ ಕಂಬಳಿ, ಕಮಲಾಕ್ಷಿ ಪೂಜಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್‌ದಾಸ್ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಪುರಸಭಾ ಮಾಜಿ ಅಧ್ಯಕ್ಷ ದಿನೇಶ್ ಭಂಡಾರಿ, ಸದಸ್ಯರಾದ ಗೋವಿಂದ ಪ್ರಭು, ಹರಿಪ್ರಸಾದ್, ಪ್ರಮುಖರಾದ ಸರಪಾಡಿ ಅಶೋಕ ಶೆಟ್ಟಿ, ದಿನೇಶ್ ಅಮ್ಟೂರು, ಪುರುಷೋತ್ತಮ ಶೆಟ್ಟಿ, ಯಶೋಧರ ಕರ್ಬೆಟ್ಟು, ಹರಿಪ್ರಸಾದ್ ಭಂಡಾರಿಬೆಟ್ಟು, ಸಂಪತ್ ಕಡೇಶ್ವಾಲ್ಯ, ಪುರುಷೋತ್ತಮ ಸಾಲ್ಯಾನ್, ಮೋನಪ್ಪ ದೇವಸ್ಯ, ಪ್ರಭಾಕರ ಪ್ರಭು, ಜನಾರ್ದನ ಬೊಂಡಾಲ, ವಸಂತ ಅಣ್ಣಳಿಕೆ, ಸನತ್‌ಕುಮಾರ್ ರೈ ಮೊದಲಾದವರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...