Tuesday, January 27, 2026

ಮೇ.5ರಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ – ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು : ಈಗಾಗಲೇ ಪರೀಕ್ಷೆ ಪೂರ್ಣಗೊಂಡಿರುವ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಮೇ 5ರಂದು ಪ್ರಕಟಿಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಫಲಿತಾಂಶವನ್ನು ಪ್ರಕಟಿಸಲು ಇಲಾಖೆ ಮುಂದಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು‌ಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆ ಸ್ಪಷ್ಟಪಡಿಸಿದೆ.

ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭ ಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದು, ಇಚ್ಛಿಸುವ ಪೋಷಕರಿಂದ ಕಂತುಗಳ ಮೂಲಕ ಸ್ವೀಕರಿಸತಕ್ಕದ್ದು ಹಾಗೂ 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿದೆ.

ಒಂದು ವೇಳೆ ಈ ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ನಿರ್ದಾಕ್ಷಿಣ್ಯವಾದ ಕ್ರಮಕ್ಕೆ ಮುಂದಾಗಲಾಗುವುದೆಂದು ಪದವಿಪೂರ್ವ ಶಿಕ್ಷಣ ನಿರ್ದೇಶಕರು ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...