Wednesday, February 4, 2026

*ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆನ್‌‌ಲೈನ್ ತರಗತಿ ಆರಂಭಿಸಿ’ – ಕಾಲೇಜು ಶಿಕ್ಷಣ ಇಲಾಖೆ ಆದೇಶ*

ಮೇ.14: ಕೊರೊನಾ ಪರಿಸ್ಥಿತಿಯಿಂದಾಗಿ ಕರ್ನಾಟಕದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಗಿತಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ತೊಂದರೆ ಆಗದಂತೆ ವಿಶ್ವವಿದ್ಯಾಲಯದ ಶೈಕ್ಷಣಿಕ ವೇಳಾಪಟ್ಟಿಯನ್ವಯ ಅತಿಥಿ ಉಪನ್ಯಾಸಕರನ್ನು ಒಳಸಿಕೊಂಡು ಆನ್‌‌ಲೈನ್ ತರಗತಿಗಳನ್ನು ನಡೆಸಲು ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕುರಿತು ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನ 2, 4 ಮತ್ತು 6ನೇ ಸಮಿಸ್ಟರ್ ಅವಧಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅವಶ್ಯಕವಿರುವ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು ಸುತ್ತೋಲೆಯಲ್ಲಿ ಅನುಮತಿ ನೀಡಲಾಗಿದೆ.

ಇನ್ನು ಪ್ರಾಂಶುಪಾಲರು ತಮ್ಮ ಕಾಲೇಜುಗಳಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಮಾಹಿತಿ ನೀಡಿ, ಅರ್ಜಿಗಳನ್ನು ಖುದ್ದಾಗಿ ಅಥವಾ ಇ-ಮೇಲ್ ಮುಖಾಂತರ ಪಡೆದು, ಸುತ್ತೋಲೆಯಲ್ಲಿ ತಿಳಿಸಿರುವಂತೆ ಆಯ್ಕೆ ಪ್ರಕ್ರಿಯೆಯನ್ನು ಒಂದು ವಾರದೊಳಗಾಗಿ ಪೂರ್ಣಗೊಳಿಸಿ, ಆಯ್ಕೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ವಿವರಗಳನ್ನು ಕೂಡಲೇ ಇಲಾಖೆಗೆ ಅಪ್ ಲೋಡ್ ಮಾಡಲು ಸೂಚಿಸಲಾಗಿದೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...