Tuesday, July 1, 2025

ಜ.31(ನಾಳೆ): ಪಂಪ್ ವೆಲ್ ಫ್ಲೈ ಓವರ್ ಉದ್ಘಾಟನೆ

ಮಂಗಳೂರು: 10 ವರ್ಷಗಳ ನಿರಂತರ ಪರಿಶ್ರಮದ ನಂತರ ಫ್ಲೈ ಓವರ್ ಸಂಚಾರಕ್ಕೆ ಮುಕ್ತವಾಗಲಿದೆ. ನಾಳೆ ಜ.೩೧ ರಂದು ಮಂಗಳೂರು ಪಂಪ್ ವೆಲ್ ಫ್ಲೈ ಓವರ್ ಉದ್ಘಾಟನೆಗೆ ದಿನ ನಿಗದಿಯಾಗಿದೆ.
ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ ಕಾಮಗಾರಿ ವಿಳಂಬ ಆಗಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದರು, ಅವರ ನೇತೃತ್ವದಲ್ಲಿ ಪ್ರತಿಭಟನೆ ಕೂಡ ನಡೆಸಲಾಗಿತ್ತು. ನಂತರದ ದಿನಗಳಲ್ಲಿ ಪಂಪ್ ವೇಲ್ ಫ್ಲೈ ಓವರ್ ಕಾಮಗಾರಿ ಚುರುಕು ಪಡೆದು, ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ದವಾಗಿದೆ. ನಾಳೆ ಫ್ಲೈ ಓವರ್ ಉದ್ಘಾಟನೆಯಾಗಲಿದ್ದು, ಅಂದಿನಿಂದಲೇ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...