Sunday, July 13, 2025

ಪುಣಚ: ಬೈಲುಗುತ್ತು ನೇಮೋತ್ಸವದಲ್ಲಿ ಸನ್ಮಾನ

ಪುಣಚ: ಗ್ರಾಮದ ಬೈಲುಗುತ್ತು ಧರ್ಮದೈವಗಳ ವರ್ಷಾವಧಿ ನೇಮೋತ್ಸವದ ಸಂದರ್ಭದಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ಕುಕ್ಕಾಡಿ ಬಾಲಕೃಷ್ಣ ಶೆಟ್ಟಿ ಸಾರಥ್ಯದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ನಟಿ ನಾಟ್ಯ ಚತುರೆ ಭವ್ಯಶ್ರೀ ರೈ ಅವರಿಂದ ನೃತ್ಯ ವೈಭವ ಮತ್ತು ಡ್ಯಾನ್ಸ್ ಡ್ಯಾನ್ಸ್ ಖ್ಯಾತಿಯ ಪೆನ್ಸಿಲ್ ಬಾಕ್ಸ್ ಚಲನಚಿತ್ರ ನಟಿ ದೀಕ್ಷಾ ಡಿ. ರೈ ಮತ್ತು ಬಳಗದವರಿಂದ ಮನೋರಂಜನಾ ಕಾರ್ಯಕ್ರಮ ಪ್ರದರ್ಶನಗೊಂಡಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭವ್ಯಶ್ರೀ ರೈ ಮತ್ತು ಅವರ ಪತಿ ಚಲನಚಿತ್ರ ನಟ ಸುರೇಶ್ ರೈ ಬೈಲುಗುತ್ತು ಮತ್ತು ದೀಕ್ಷಾ ಡಿ ರೈ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಬಂಬ್ರಾಣ ಮನೆತನದ ಯಜಮಾನ ಮೋಹನದಾಸ ರೈ, ಕುಕ್ಕಾಡಿ ಬಾಲಕೃಷ್ಣ ಶೆಟ್ಟಿ ಮತ್ತು ಜಗನ್ನಾಥ ರೈ ಬೈಲುಗುತ್ತು, ಪ್ರಪುಲ್ಲಾ ಜೆ ರೈ, ವಿಠಲ ರೈ ಬೈಲುಗುತ್ತು, ಜಯಂತಿ ರೈ ಬೈಲುಗುತ್ತು, ಮಾರಪ್ಪ ಶೆಟ್ಟಿ ಬೈಲುಗುತ್ತು, ಸದಾಶಿವ ರೈ ಬೈಲುಗುತ್ತು ಉಪಸ್ಥಿತರಿದ್ದರು.
ಶ್ರೀದೇವಿ ಸ್ವಾಗತಿಸಿದರು. ರಾಜೇಂದ್ರ ರೈ ವಂದಿಸಿದರು.

More from the blog

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...