ವಿಟ್ಲ: ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆ ಪುತ್ತೂರು ಇದರ ಯೋಜನೆಯಡಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುಣಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 1.33 ಕೋಟಿ ಅನುದಾನದ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಯಶ್ರೀ ಕೋಡಂದೂರು, ಪುಣಚ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರತಿಭಾ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷರಾದ ಮಹೇಶ್ ಶೆಟ್ಟಿ ಮತ್ತು ಸದಸ್ಯರಾದ ಉದಯ ಕುಮಾರ್ ದಂಬೆ, ಬಾಲಕೃಷ್ಣ ಎಚ್, ಮೋಹಿನಿ, ಅಮಿತ, ಬಿಜೆಪಿ ಪ್ರಮುಖರಾದ ಹರಿಪ್ರಸಾದ್ ಯಾದವ್, ರಾಮಕೃಷ್ಣ ಮೂಡಂಬೈಲು, ಪ್ರವೀಣ್ ಪುಣಚ, ಹರೀಶ್ ಎಂ. ಹಾಗೂ ಹಲವು ಗಣ್ಯರು, ಪುಣಚ ಪಿಡಿಒ ಲಾವಣ್ಯ, ಕಾರ್ಯಕರ್ತರು ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.














