Wednesday, January 28, 2026

‘ದೇಗುಲ, ಮಠ, ಮಂದಿರಗಳೆಲ್ಲವುಗಳಿಗೂ ಧರ್ಮವೇ ಮೂಲಾಧಾರ’- ಕುಂಟಾರು ರವೀಶ ತಂತ್ರಿ

 

ಪುಣಚ: ದೇಗುಲ, ಮಠ, ಮಂದಿರಗಳೆಲ್ಲವುಗಳಿಗೂ ಧರ್ಮವೇ ಮೂಲಾಧಾರವಾಗಿದೆ. ಜಾತ್ಯಾತೀತತೆಯ ನೆಪದಲ್ಲಿ ದೇಶದಲ್ಲಿ ಹಿಂದೂ ಧರ್ಮಕ್ಕೆ ಧಕ್ಕೆಯಾಗುತ್ತಿದೆ. ಹಿಂದೂ ಪುರಾಣ, ಶಾಸ್ತ್ರ, ಆಚಾರವಿಚಾರಗಳ ಬಗ್ಗೆ ಅನಗತ್ಯ ತಪ್ಪು ಸಂದೇಶಗಳು ಹರಿದಾಡುತ್ತಿರುವುದರಿಂದ ಅಪನಂಬಿಕೆ ಹೆಚ್ಚಾಗುತ್ತಿದೆ. ಸ್ವಾರ್ಥ ಲಾಲಸೆ ಮಿತಿಮೀರುತ್ತಿರುವುದು ಧರ್ಮ ಸಂಕಟಕ್ಕೆ ಕಾರಣವಾಗುತ್ತಿದ್ದು, ಸ್ವಾಭಿಮಾನದೊಂದಿಗೆ ಧರ್ಮ ಜಾಗೃತಿಗೊಳಿಸುವ ಕಾರ್ಯವಾಗಬೇಕಾಗಿದೆ ಎಂದು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಹೇಳಿದರು.
ಅವರು ಗುರುವಾರ ಪುಣಚ ಗ್ರಾಮದ ನಿಡ್ಯಾಳಗುತ್ತು ತರವಾಡು ಮನೆಯ ಗೃಹ ಪ್ರವೇಶ ಮತ್ತು ದೈವಗಳ ಪ್ರತಿಷ್ಠೆಯ ಬಳಿಕ ನಡೆದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಧಾರ್ಮಿಕ ಉಪನ್ಯಾಸ ನೀಡಿದರು. ಭಾರತದ ಸಂಸ್ಕøತಿ ವಿಶ್ವಮಾನ್ಯವಾಗಿದೆ. ಪ್ರೀತಿ, ವಿಶ್ವಾಸ, ಸಹಿಷ್ಣುತೆಯ ಮನೋಧರ್ಮ ನಮ್ಮ ದೇಶದ ಹೆಗ್ಗಳಿಕೆಯಾಗಿದೆ. ಲೌಕಿಕ ಬದುಕಿನೊಂದಿಗೆ ಅಲೌಕಿಕ ಸಂವೇದನೆಯ ಸ್ಪರ್ಶ ಸಿಕ್ಕಿದಾಗ ಪೂರ್ಣತ್ವದ ಬದುಕೆನಿಸುತ್ತದೆ ಎಂದ ಅವರು ಧರ್ಮದ ಉಳಿವಿಗಾಗಿ ನಾವು ತ್ಯಾಗಪರರಾಗಬೇಕೆಂದು ತಿಳಿಸಿದರು.
ವಿಟ್ಲ ಅರಮನೆಯ ಜನಾರ್ದನ ವರ್ಮ ಅರಸರು ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತಕ ಸಜೇಶ್ ಮುಳ್ಳೇರಿಯ, ಕ್ಷೇತ್ರದ ವಾಸ್ತುಶಿಲ್ಪಿ ರಾಧಾಕೃಷ್ಣ ಆಚಾರ್ಯ, ತರವಾಡಿನ ಹಿರಿಯರಾದ ಚೆನ್ನಪ್ಪ ಗೌಡ ನಿಡ್ಯಾಳಗುತ್ತು, ಶೀನಪ್ಪ ಗೌಡ ನಿಡ್ಯಾಳಗುತ್ತು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿಟ್ಲ ಸೀಮೆಯ ಅರಸರನ್ನು, ಕ್ಷೇತ್ರದ ತಂತ್ರಿವರ್ಯರನ್ನು, ವಾಸ್ತುಶಿಲ್ಪಿ ಹಾಗೂ ಇತರ ಕಾಮಗಾರಿಗಳನ್ನು ನಿರ್ವಹಿಸಿದ ಮಹನೀಯರುಗಳನ್ನು ಗೌರವಿಸಲಾಯಿತು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ನಿಡ್ಯಾಳಗುತ್ತು ಸ್ವಾಗತಿಸಿದರು. ಶಶಿಧರ ಕಿನ್ನಿಮಜಲು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಬೆಳಗ್ಗೆ ಶ್ರೀ ಕ್ಷೇತ್ರದಲ್ಲಿ ಗಣಪತಿ ಹೋಮ, ಬ್ರಹ್ಮಕಲಶ ಪೂಜೆ, ತರವಾಡು ಮನೆಯ ಗೃಹ ಪ್ರವೇಶ, ಶ್ರೀಸತ್ಯನಾರಾಯಣ ಪೂಜೆ, ಹರಿಸೇವೆ, ರುದ್ರ ಚಾಮುಂಡಿ, ಸತ್ಯಜ್ಯಾವತೆ, ಕುಪ್ಪೆ ಪಂಜುರ್ಲಿ, ವರ್ಣರ ಪಂಜುರ್ಲಿ, ಕಲ್ಲುರ್ಟಿ, ದೈವಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆಯಿತು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...