Friday, January 30, 2026

ಪುಣಚ ಶ್ರೀ ಮಹಿಷಮರ್ದಿನಿ ದೇಗುಲದಲ್ಲಿ ಜಾತ್ರೋತ್ಸವ ಧ್ವಜಾರೋಹಣ

ಪುಣಚ : ಶ್ರೀಮಹಿಷಮರ್ದಿನಿ ದೇವಸ್ಥಾನದ ವರ್ಷಾವಧಿ ಜಾತ್ರೆಯು ಭಾನುವಾರ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಿತು. ಧ್ವಜಾರೋಹಣದ ಬಳಿಕ ದೇವರ ನಿತ್ಯ ಬಲಿ, ಭೂತ ಬಲಿ ಉತ್ಸವ ನಡೆಯಿತು. ಅನ್ನಂಸಂತರ್ಪಣೆ, ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ವಿಟ್ಲ ಅರಮನೆ ಅನುವಂಶಿಕ ಮೊಕ್ತೇಸರ ಪ್ರತಿನಿಧಿ ನಂದವರ್ಮ, ಆಡಳಿತ ಮಂಡಳಿ ಅಧ್ಯಕ್ಷರಾದ ಎಸ್. ಆರ್. ರಂಗಮೂರ್ತಿ, ಉಪಾಧ್ಯಕ್ಷರಾದ ಮಾರಪ್ಪ ಶೆಟ್ಟಿ, ಕಾರ್‍ಯದರ್ಶಿ ಶ್ರೀಧರ ಶೆಟ್ಟಿ ದೇವರಗುಂಡಿ, ಕೋಶಾಧಿಕಾರಿ ಶಂಕರ್ ನಾರಾಯಣ ಭಟ್ ಮಲ್ಯ, ಆಡಳಿತ ಮಂಡಳಿ ಸದಸ್ಯರು, ಹಾಗೂ ಊರಪರವೂರ ಭಕ್ತರು ಭಾಗವಹಿಸಿದ್ದರು.
ಜಾತ್ರೋತ್ಸವದ ಅಂಗವಾಗಿ ಎ.8 ರಂದು ದೀಪ ಬಲಿ, ದರ್ಶನ ಬಲಿ, ಭೂತ ಬಲಿ ಉತ್ಸವ, ದೀಪ ಬಲಿ, ದರ್ಶನ ಬಲಿ, ಭೂತಬಲಿ, ಕೆರೆಕಟ್ಟೆ ಉತ್ಸವ, ಎ.10 ರಂದು ದೀಪ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ಉತ್ಸವ ಬಲಿ, ದರ್ಶನ ಬಲಿ, ಬೆಡಿಕಟ್ಟೆ ಉತ್ಸವ, ಸಿಡಿಮದ್ದು ಪ್ರದರ್ಶನ, ಮೃಗಬೇಟೆ ಸವಾರಿ, ಭೂತಬಲಿ, ಎ.11 ರಂದು ಕವಾಟೋದ್ಘಾಟನೆ, ತುಲಾಭಾರ ಸೇವೆ, ರಾತ್ರಿ ಪಡುಪೇಟೆ ಸವಾರಿ, ಅವಭೃತ ಸ್ನಾನ, ಬಟ್ಟಲು ಕಾಣಿಕೆಯ ಬಳಿಕ ಧ್ವಜಾವರೋಹಣ ನಡೆಯಲಿದೆ. ಇದೇ ಸಂದರ್ಭದಲ್ಲಿ ಪ್ರತೀದಿನ ದೇಗುಲದ ಮುಂಭಾಗದ ಗದ್ದೆಯಲ್ಲಿರುವ ಬಯಲು ರಂಗಮಂದಿರದಲ್ಲಿ ನಾನಾ ಸಾಂಸ್ಕೃತಿಕ ಕಾರ್‍ಯಕ್ರಮಗಳು ನಡೆಯಲಿವೆ.

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...