Wednesday, January 28, 2026

ಪುಣಚ ಮನೆಲಾ ಚರ್ಚ್‌ಗೆ ಐವನ್ ಡಿಸೋಜ ಭೇಟಿ

ವಿಟ್ಲ: ಪುಣಚ ಮನೆಲ ಕ್ರಿಸ್ತರಾಜ ದೇವಾಲಯದ ಸಮೀಪ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಯೇಸುಕ್ರಿಸ್ತ ದೇವರ ವಿಗ್ರಹ ಭಂಜನೆ ಮಾಡಿದ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್‍ಯದರ್ಶಿ ಐವನ್ ಡಿಸೋಜ ಭಾನುವಾರ ಭೇಟಿ ನೀಡಿದರು. ಚರ್ಚ್‌ನ ಧರ್ಮಗುರು ಪ್ರಕಾಶ್ ಡಿಸೋಜಾ ಅವರಲ್ಲಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಬಳಿಕ ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿಟ್ಲ ಠಾಣೆಯ ಎಸ್‌ಐ ಯವರಿಗೆ ದೂರವಾಣಿ ಮೂಲಕ ಒತ್ತಾಯಿಸಿದರು. ಇದೇ ಸ್ಥಳದಲ್ಲಿ ಹೈಮಾಸ್ಟ್ ದೀಪ ಅಳವಡಿಸಲು ಎಂಎಲ್‌ಸಿ ನಿಧಿಯಿಂದ ಅನುದಾನ ಒದಗಿಸುವ ಬಗ್ಗೆ ಭರವಸೆ ನೀಡಿದರು.
ಅವರೊಂದಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಎಂ. ಎಸ್.ಮಹಮ್ಮದ್, ಕ್ರೈಸ್ತ ಮುಖಂಡರು, ಚರ್ಚ್‌ಪಾಲನಾ ಸಮಿತಿ ಪದಾಧಿಕಾರಿಗಳು, ವಾಲೆ ಮುಖ್ಯಸ್ಥರು, ಕ್ರೈಸ್ತ ಬಂಧುಗಳು ಉಪಸ್ಥಿತರಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...