ಪುಣಚ: ಪುಣಚ ಮೂಡಂಬೈಲು ಸಾರಡ್ಕ ಅಡ್ಯನಡ್ಕ – ವಿಟ್ಲ ಮಾರ್ಗವಾಗಿ ಪುತ್ತೂರಿಗೆ ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ಸು ಸಂಚಾರವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪುಣಚ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾದ ಪ್ರತಿಭಾ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷರಾದ ಮಹೇಶ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು, ಪುತ್ತೂರು ಮಂಡಲ ಬಿಜೆಪಿ ಕಾರ್‍ಯದರ್ಶಿ ರಾಮಕೃಷ್ಣ ಮೂಡಂಬೈಲು, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರಾದ ಹರೀಶ್. ಎಂ. ಜಯರಾಮ ರೈ, ರಾಜೇಂದ್ರ ರೈ, ಉದಯ ಕುಮಾರ್ ದಂಬೆ, ಜಗದೀಶ ಮಾರಮಜಲು, ಜಗದೀಶ. ಎಂ, ಇನ್ನಿತರರು ಉಪಸ್ಥಿತರಿದ್ದರು.
