ಪುಂಜಾಲಕಟ್ಟೆ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ೪೦ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.24ರಂದು ನಡೆಯಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ಸಂಪ್ರದಾಯಬದ್ಧವಾಗಿ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಮಾ.17ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಜರಗಲಿದೆ.


ಈ ಬಾರಿ ಒಟ್ಟು 10 ಜೋಡಿಗಳಿಗೆ ವಿವಾಹ ನಡೆಯಲಿದ್ದು, ತುಳುನಾಡಿನ ಸಂಪ್ರದಾಯ ಪ್ರಕಾರ ನಿಶ್ಚಿತಾರ್ಥ ನಡೆಯಲಿದೆ.
ಈ ಸಂದರ್ಭದಲ್ಲಿ ಭಾವೀ ವಧು-ವರರಿಗೆ ಮಂಗಳವಸ್ತ್ರವನ್ನು ವಿತರಿಸಲಾಗುವುದು. ಜನ ಜಾಗೃತಿ ವೇದಿಕೆ ಅಧ್ಯಕ್ಷ ಹರೀಂದ್ರ ಪೈ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಮೂರ್ಜೆ ನಾರಾಯಣ ಗುರು ವಸತಿ ಶಾಲೆ ಪ್ರಾಂಶುಪಾಲ ಸಂತೋಷ್ ಸನಿಲ್ ಅವರು ಅಧ್ಯಕ್ಷತೆ ವಹಿಸುವರು. ಉದ್ಯಮಿ ನಾಗೇಶ್ ಪ್ರಭು ಅವರು ಮಂಗಳ ವಸ್ತ್ರ ವಿತರಿಸುವರು.
ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಹಾಗೂ ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ












