Thursday, February 13, 2025

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.24ರಂದು ನಡೆಯಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆಮೈದಾನದ ಸಭಾಂಗಣದಲ್ಲಿ ರವಿವಾರ ನಡೆಯಿತು.

ನಯನಾಡು ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್‌ನ ಮಾಲಕ ಟಿ.ಹರೀಂದ್ರ ಪೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದುಂದು ವೆಚ್ಚದ ವಿವಾಹಗಳ ಬದಲಾಗಿ ಸಾಮೂಹಿಕ ವಿವಾಹ ಉತ್ತಮ ಕಾರ್ಯವಾಗಿದೆ ಎಂದು ಹೇಳಿದರು.

ಮೂರ್ಜೆ ನಾರಾಯಣ ಗುರು ವಸತಿ ಶಾಲೆ ಪ್ರಾಂಶುಪಾಲ ಸಂತೋಷ್ ಸನಿಲ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,ಭಾರತೀಯ ವಿವಾಹ ಪದ್ಧತಿ ಕುಟುಂಬ ಜೀವನದ ಭದ್ರ ಬುನಾದಿಯಾಗಿದೆ. ಇದು ಕುಟುಂಬದ ಹಾಗೂ ಸಮಾಜದ ನೆಮ್ಮದಿಯ ಸುವ್ಯವಸ್ಥೆಯಾಗಿದೆ ಎಂದರು.

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ಬಡ, ಹಿಂದುಳಿದ ವರ್ಗದ ಜನತೆ ಅದ್ಧೂರಿಯ ವಿವಾಹ ನಡೆಸಲು ಅಸಾಧ್ಯವಾದ ಕಾರಣ ಸಾಮೂಹಿಕ ವಿವಾಹದ ಮೂಲಕ ವಿಜೃಂಭಣೆಯಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಉದ್ಯಮಿ ನಾಗೇಶ್ ಪ್ರಭು ಮೂರ್ಜೆ ಅವರು ಮಂಗಳ ವಸ್ತ್ರ ವಿತರಿಸಿದರು. ಬಡಗಕಜೆಕಾರು ಪ್ರಾ.ಕೃ.ಸಹಕಾರಿ ಸಂಘದ ಉಪಾಧ್ಯಕ್ಷ ರೋಹಿನಾಥ ಕಂರ್ಬಡ್ಕ, ಬಿ.ಸಿ.ರೋಡ್ ನ್ಯಾಯವಾದಿ ಚಿದಾನಂದ ಕಡೇಶ್ವಾಲ್ಯ, ಮಡಂತ್ಯಾರು ಗ್ರಾ.ಪಂ.ಅಧ್ಯಕ್ಷೆ ರೂಪಾ ನವೀನ್, ಮಡಂತ್ಯಾರು ಜೇಸೀ ಅಧ್ಯಕ್ಷ ವಿಕೇಶ್ ಮಾನ್ಯ, ಶ್ರೀ ರಾಮಾಂಜನೇಯ ಭಜನ ಮಂದಿರದ ಅಧ್ಯಕ್ಷ ಶ್ರೀನಿವಾಸ ಅತ್ತಾಜೆ, ಗ್ರಾ.ಪಂ. ಸದಸ್ಯ ಕಾಂತಪ್ಪ ಕರ್ಕೇರ,ಉದ್ಯಮಿ ಗಣೇಶ ಮೂಲ್ಯ ಅನಿಲಡೆ, ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕುರ್ಡುಮೆ, ಪಿಲಾತಬೆಟ್ಟು ಗ್ರಾ.ಪಂ.ಸದಸ್ಯ ಲಕ್ಷ್ಮೀ ನಾರಾಯಣ ಹೆಗ್ಡೆ, ಪಿಲಾತಬೆಟ್ಟು ಪ್ರಾ.ಕೃ.ಸ.ಸಂಘದ ನಿರ್ದೇಶಕಿ ಸರೋಜಾ ಶೆಟ್ಟಿ, ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಸಂಚಾಲಕ ರಾಜೇಶ್ ಬಂಗೇರ ಪುಳಿಮಜಲು,ಕಾರ್ಯದರ್ಶಿ ಜಯರಾಜ ಅತ್ತಾಜೆ, ಮಾಜಿ ಅಧ್ಯಕ್ಷರಾದ ಮಾಧವ ಬಂಗೇರ, ರತ್ನಾಕರ ಪಿ.ಎಂ.,ಹರೀಶ್ಚಂದ್ರ ಶೆಟ್ಟಿಗಾರ್‌ಮತ್ತಿತರರು ಉಪಸ್ಥಿತರಿದ್ದರು.

ಶಂಕರ ಶೆಟ್ಟಿ ಬೆದ್ರಮಾರ್ ಮತ್ತು ಗಿರೀಶ್ ಸಾಲ್ಯಾನ್ ಹೆಗ್ಡೆಬೆಟ್ಟುಗುತ್ತು ಅವರು ಗುರಿಕಾರರಾಗಿ ಭಾಗವಹಿಸಿ ನಿಶ್ಚಯ ತಾಂಬೂಲ ನೆರವೇರಿಸಿದರು. ಗುರಿಕಾರರು ತುಳುನಾಡಿನ ಸಂಪ್ರದಾಯ ಪ್ರಕಾರ ವೀಳ್ಯೆದೆಲೆ , ಅಡಿಕೆ, ಮಲ್ಲಿಗೆ ಹೂವು ಇರಿಸಿದ ಹರಿವಾಣವನ್ನು ಪರಸ್ಪರ ಬದಲಾಯಿಸಿಕೊಂಡರು. 6 ಜೋಡಿ ವಧು, ವರರಿಗೆ ಮಂಗಳ ವಸ್ತ್ರ ವಿತರಿಸಲಾಯಿತು. ವಧು-ವರರ ಕುಟುಂಬಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕ್ಲಬ್ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿ,ವಂದಿಸಿದರು.ರಂಗ ಕಲಾವಿದ ಎಚ್ಕೇ ನಯಾನಾಡು ಅವರು ಕಾರ್ಯಕ್ರಮ ನಿರೂಪಿಸಿದರು.

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...