Friday, July 11, 2025

ಪುಂಜಾಲಕಟ್ಟೆ ಪೋಲೀಸರಿಂದ ಕಾರ್ಯಚರಣೆ : ಅನಗತ್ಯವಾಗಿ ತಿರುಗಾಟ ಮಾಡಿದ ವಾಹನಗಳ ವಶ

ಬಂಟ್ವಾಳ: ಸೋಮವಾರವೂ ಮುಂದುವರಿದ ಪುಂಜಾಲಕಟ್ಟೆ ಪೋಲೀಸರ ಕಾರ್ಯಚರಣೆ ವಾಹನಗಳ ವಶಕ್ಕೆ ಪಡೆದುಕೊಂಡ ಎಸ್.ಐ.ಸೌಮ್ಯ.

ಪೋಲೀಸರ ಕಾರ್ಯಚರಣೆ ನಡೆಯುತ್ತಲೇ ಇದೆ, ವಾಹನಗಳ ವಶಕ್ಕೆ ಪಡೆಯುತ್ತಲೇ ಇದ್ದಾರೆ ಅದರೂ ಅನಗತ್ಯ ಸಂಚಾರಕ್ಕೆ ಮಾತ್ರ ಕಡಿವಾಣ ಬಿದ್ದಿಲ್ಲ.ಇದು ವಾಸ್ತವಿಕ ವಿಚಾರ. ಜಿಲ್ಲೆಯಾದ್ಯಂತ ಲಾಕ್ ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳ ಹೊರತಾಗಿ ಸಂಚಾರ ಮಾಡುವಂತೆ ಇಲ್ಲ ಎಂಬ ಜಿಲ್ಲಾಡಳಿತ ದ ಆದೇಶವಿದ್ದರೂ ಕೂಡಾ ಸಾಮಾಗ್ರಿಗಳ ಖರೀದಿ ನೆಪದಲ್ಲಿ ಸಂಚಾರ ಮಾಡುವ ಯುವಕರಿಗೇನು ಕಮ್ಮಿಯಿಲ್ಲ. ಇಂದು ಬೆಳ್ಳಂ ಬೆಳ್ಳಿಗೆಯೆ ರೋಡಿಗಿಳಿದ ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತ್ರತ್ವದ ಪೋಲೀಸರ ತಂಡ ದಾಖಲೆಗಳಿಲ್ಲದ ಹಾಗೂ ಅನಗತ್ಯವಾಗಿ ಸಂಚಾರ ಮಾಡುವ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

More from the blog

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....