Tuesday, February 3, 2026

ಅನಗತ್ಯ ತಿರುಗಾಟ ನಡೆಸುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಎಸ್.ಐ.ಸೌಮ್ಯ

ಪುಂಜಾಲಕಟ್ಟೆ: ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಪುಂಜಾಲಕಟ್ಟೆ ಎಸ್. ಐ. ಸೌಮ್ಯ
ಕೋವಿಡ್19 ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಲಾಕ್ ಡೌನ್ ಮಾಡಲಾಗಿದ್ದರು ಕೂಡಾ ವಾಹನ ಸವಾರರು ಮಾತ್ರ ರಸ್ತೆಗಿಳಿಯುವುದು ತಪ್ಪಿಲ್ಲ.


ಅಗತ್ಯ ವಸ್ತುಗಳ ಪಡೆಯಲು ಜಿಲ್ಲಾಡಳಿತ ಬೆಳಿಗ್ಗೆ 7ರಿಂದ ಮಧ್ಯಾಹ್ನ 12 ಗಂಟೆಯ ವರಗೆ ಅವಕಾಶ ನೀಡಿದೆ ಆದರೆ ಜನರು ಮಾತ್ರ ಇದರ ದುರ್ಬಳಕೆ ಮಾಡಿಕೊಂಡು ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದಾರೆ. ಪೋಲೀಸರು ಪದೇ ಪದೇ ಎಚ್ಚರಿಕೆ ನೀಡಿದರು ಜನ ಮಾತ್ರ ಅರ್ಥ ಮಾಡಿಕೊಂಡಿಲ್ಲ. ಪ್ರತಿನಿತ್ಯ ಪೋಲೀಸರು ಅಂತಹ ವಾಹನ ಸವಾರರಿಗೆ ಎಚ್ಚರಿಕೆ ನೀಡುವುದರ ಜೊತೆಗೆ ದಂಡ ವಸೂಲಿ ಮಾಡುತ್ತಿದ್ದಾರೆ.
ಇಂದು ಬೆಳಿಗ್ಗೆಯೇ ರಸ್ತೆಗಿಳಿದು ಅಂತಹ ವಾಹನಗಳನ್ನು ತಡೆದ ಎಸ್.ಐ ಸೌಮ್ಯ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...