Wednesday, January 28, 2026

ಅಕ್ರಮ ಕಸಾಯಿಖಾನೆಗೆ ದಾಳಿ: ಇಬ್ಬರು ಆರೋಪಿಗಳ ಬಂಧನ

ಪುಂಜಾಲಕಟ್ಟೆ: ಅಕ್ರಮವಾಗಿ ದನವನ್ನು ವಧೆ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನು ಬಂಧಸಿದ್ದಾರೆ.

ದಾಳಿಯ ವೇಳೆ ಓರ್ವ ಆರೋಪಿ ಪರಾರಿಯಾಗಿದ್ದು,  ಆತನ ಪತ್ತೆಗೆ ಬಲೆ ಬೀಸಿದ್ದಾರೆ.
ಮಚ್ಚಿನ ನಿವಾಸಿಗಳಾದ ಮಹಮ್ಮದ್ ಹನೀಫ್ ಮತ್ತು ಮಹಮ್ಮದ್ ಸಾಧಿಕ್ ಬಂಧಿತ ಆರೋಪಿಗಳು.
ಹಂಝ ಪರಾರಿಯಾದ ಆರೋಪಿ. ಬಂಧಿತರಿಂದ ಸುಮಾರು 3000 ಮೌಲ್ಯದ 15 ಕೆ.ಜಿ.ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜೊತೆಗೆ ವದೆ ಮಾಡಲು ಬಳಸಿದ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಬೆರ್ಬಲಾಜೆ ಮಹಮ್ಮದ್ ಹನೀಪ್ ಅವರ ಮನೆಯ ಹಿಂಬದಿಯ ಕೊಟ್ಟಿಗೆಯಲ್ಲಿ ಅಕ್ರಮವಾಗಿ ದನಗಳ ವಧೆ ಮಾಡಲಾಗುತ್ತಿದೆ ಎಂಬ ಆರೋಪದಲ್ಲಿ
ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತೃತ್ವದ ತಂಡ ದಾಳಿ ನಡೆಸಿತ್ತು.

More from the blog

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...