Friday, June 27, 2025

ಮಾಸ್ಕ್ ಧರಿಸದ ವಿಚಾರವಾಗಿ ಖಾಸಗಿ ಮಳಿಗೆಯ ಸಿಬ್ಬಂದಿಗಳು ಹಾಗೂ ಗ್ರಾಹಕರ ನಡುವೆ ಹೊಡೆದಾಟ

ಪುತ್ತೂರು:  ಮಾಸ್ಕ್ ಹಾಕದ ವಿಚಾರದಲ್ಲಿ ಖಾಸಗಿ ಮಳಿಗೆಯ ಸಿಬ್ಬಂದಿಗಳು ಹಾಗೂ ಗ್ರಾಹಕರ ನಡುವೆ ಹೊಡೆದಾಟ ನಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.

ಪುತ್ತೂರಿನಲ್ಲಿರುವ ರಿಲಯನ್ಸ್ ಸ್ಮಾಟ್೯ ಮಳಿಗೆಯ ಮುಂಭಾಗದಲ್ಲಿ ಖರೀದಿಗೆ ಅಗಮಿಸಿದ್ದ ಗ್ರಾಹಕನೊಬ್ಬ ಮಾಸ್ಕ್ ಹಾಕದೇ ಸಾರತಿ ಸಾಲಿನಲ್ಲಿ ನಿಂತಿದ್ದ. ಕೊರೋನಾ ವೈರಸ್ ಸೋಂಕು ತಡೆಗಟ್ಟಲು ಹಾಗೂ ರಕ್ಷಿಸಿಕೊಳ್ಳಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ಅದ್ರೆ ಮಾಸ್ಕ್ ಧರಿಸದ ಗ್ರಾಹನಿಗೆ ಮಳಿಗೆಯ ಸಿಬ್ಬಂದಿಗಳು ಖರೀದಿಗೆ ಪ್ರವೇಶ ನಿರಾಕರಿಸಿದರು. ಇದರಿಂದ ಅಕ್ರೋಶಗೊಂಡ ಗ್ರಾಹಕ ತನ್ನ ಸ್ನೇಹಿತರ ಜೊತೆ ಸೇರಿ ಮಳಿಗೆಯ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದು, ಎರಡು ತಂಡದ ಮಧ್ಯೆ ಮಾರಾಮಾರಿ ನಡೆದಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಅಗಮಿಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...