Wednesday, February 12, 2025

ಪುತ್ತೂರಿನಲ್ಲಿ ಕರ್ನಾಟಕ ಪೊಲೀಸ್ ರನ್ – ಮಾದಕ ದ್ರವ್ಯಗಳ ದುಷ್ಪರಿಣಾಮ ಜಾಗೃತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್‌ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್‌ ರನ್ – 2024 ಕಾರ್ಯಕ್ರಮಕ್ಕೆ ಪುತ್ತೂರಿನಲ್ಲಿ ಮಾ.10 ರಂದು ಬೆಳಿಗ್ಗೆ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್‌ ಠಾಣೆಯ ತನಕದ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಡೆಯುವ ಪೊಲೀಸ್ ರನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡರು. ಈ ಸಂದರ್ಭ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮಪ್ಪ ಸಹಿತ ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಉಪ ವಿಭಾಗ ಎಲ್ಲಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಮತ್ತು ವಿವೇಕಾನಂದ ಹಾಗು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಪೊಲೀಸ್ ರನ್ ಲ್ಲಿ ಪಾಲ್ಗೊಂಡರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...