Sunday, June 29, 2025

ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್‌‌‌‌‌‌‌ ಮುಗಿದ ಬಳಿಕ ಹೋಂಕ್ವಾರಂಟೈನ್‌‌ಗೆ ಅನುಮತಿ – ಆರೋಗ್ಯ ಇಲಾಖೆ

ಬೆಂಗಳೂರು: ‌ ಸೋಂಕು ನಿಯಂತ್ರಣ ಭಾಗವಾಗಿ ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್‌‌‌ಗೆ ಒಳಗಾದ ಬಳಿಕ ಸೋಂಕಿನ ಲಕ್ಷಣ ಕಂಡು ಬರದಿದ್ದಲ್ಲಿ ಅಂತಹ ವ್ಯಕ್ತಿಗಳನ್ನು ಹೋಂಕ್ವಾರಂಟೈನ್‌ಗೆ ಒಳಪಡಿಸಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ಕೊರೊನಾ ಸೋಂಕು ಪ್ರಕರಣಗಳು ಅಧಿಕವಾಗುತ್ತಿರುವ ಕಾರಣ ಸೋಂಕಿತರನ್ನು ಸಾಂಸ್ಥಿಕ ಕ್ವಾರಂಟೈನ್‌‌ಗೆ ಒಳಪಡಿಸಿವುದು ಕಷ್ಟವಾಗುವ ಹಿನ್ನೆಲೆ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕ್ವಾರಂಟೈನ್‌ ಅವಧಿಯನ್ನು 7 ದಿನಕ್ಕೆ ಇಳಿಕೆ ಮಾಡಲಾಗಿದೆ.

ಈ ಬಗ್ಗೆ ಅಧಿಸೂಚನೆ ಜಾರಿಯಾಗಿದ್ದು, ಏಳು ದಿನದ ನಂತರ ಕೊರೊನಾ ಸೋಂಕಿನ ಲಕ್ಷಣಗಳು ಇಲ್ಲದಿದ್ದರೆ ಅಂತಹ ವ್ಯಕ್ತಿಗಳನ್ನು ಆರ್‌‌.ಟಿ.ಪಿ.ಸಿ.ಆರ್‌‌‌‌‌ ಕೊರೊನಾ ಪರೀಕ್ಷೆ ಮಾಡದೇ ಥರ್ಮಲ್‌‌‌‌ ಸ್ಕ್ರೀನಿಂಗ್‌‌‌ ಮಾಡಿ ಹೋಂಕ್ವಾರಂಟೈನ್‌‌‌‌‌‌ಗೆ ಕಳುಹಿಸಬಹುದು ಎಂದು ತಿಳಸಿದೆ.

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗ, ಶ್ವಾಸಕೋಶ ಸಮಸ್ಯೆಗಳಿದ್ದಲ್ಲಿ ಅಂತಹವರನ್ನು ಹೋಂ ಕ್ವಾರೆಂಟೈನ್ ಗೆ ಒಳಪಡಿಸಬಹುದು. ಹೋಂಕ್ವಾರಂಟೈನ್‌ಗೆ ಒಳಪಡುವವರು ಕಡ್ಡಾಯಾಗಿ ಮನೆಯಲ್ಲಿ ಇರಬೇಕು. ಇದರೊಂದಿಗೆ ಕೈಗೆ ಮುದ್ರೆ ಒತ್ತಿ ಕಳುಹಿಸಬೇಕು. ಅಲ್ಲದೇ ವಾಚ್‌‌‌ ಆ್ಯಪ್‌‌ನಲ್ಲಿ ಹೆಸರು ನೋಂದಾವಣೆ ಮಾಡಿಸಿಕೊಳ್ಳುವುದು ಕೂಡಾ ಕಡ್ಡಾಯ ಎಂದು ಹೇಳಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಲಕ್ಷಾಂತರ ಮಂದಿ ಆಗಮಿಸುತ್ತಿದ್ದು, ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸುವುದು ಸವಾಲಾಗಿದೆ. ತನ್ನ ಮಾರ್ಗಸೂಚಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಪಾಡು ಮಾಡಿದ್ದು, ಈಗ ಸಾಂಸ್ಥಿಕ ಕ್ವಾರಂಟೈನ್‌‌ ಅವಧಿಯನ್ನು ಶೇ. 50 ರಷ್ಟು ಇಳಿಕೆ ಮಾಡಿದೆ.

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...