Friday, July 11, 2025

ಹೊರರಾಜ್ಯದಿಂದ ಬಂದು ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಓಡಾಟ ನಡೆಸುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು: ತಹಶೀಲ್ದಾರ್ ರಶ್ಮಿ ಎಸ್.ಆರ್.

ಬಂಟ್ವಾಳ: ಹೊರರಾಜ್ಯದಿಂದ ಬಂಟ್ವಾಳ ತಾಲೂಕಿಗೆ ಬಂದು ಸರಕಾರಿ ಹಾಗೂ ಹೋಟೆಲ್ ಕ್ವಾರಂಟೈನ್ ನಲ್ಲಿರುವ ವರು ಹೊರಗಡೆ ಬಂದು ಓಡಾಟ ನಡೆಸುವುದು ಕಂಡು ಬಂದರೆ ಅಂಥವರ ವಿರುದ್ಧ ಬಂಟ್ವಾಳ ತಾಲೂಕು ಅಡಳಿತ ಯಾವುದೇ ಮುಲಾಜಿಲ್ಲದೆ ಸೆಕ್ಷನ್ 188 ಪ್ರಕಾರ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್.ತಿಳಿಸಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಲ್ಲಿ ಒಟ್ಟು ಮೂರು ಖಾಸಗಿ ವಸತಿಗೃಹ ಸೇರಿದಂತೆ 12 ಕ್ವಾರಂಟೈನ್ ಕೇಂದ್ರಗಳನ್ನು ತೆರಯಲಾಗಿದ್ದು, ಹೊರರಾಜ್ಯದಿಂದ 200 ಕ್ಕೂ ಅಧಿಕ ಮಂದಿ ವಾಸ್ತವ್ಯ ಇದ್ದಾರೆ.
ಕ್ವಾರಂಟೈನ್ ಕೇಂದ್ರ ದಿಂದ ಹೊರಗಡೆ ಸುತ್ತಾಡುವುದು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ಮಾತು ಹೇಳಿದ್ದಾರೆ.
ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಹೊರಗಡೆ ಬಂದು ಜನರ ಸಂಪರ್ಕ ಮಾಡುವುದು ಮತ್ತು ಓಡಾಡುವುದು ಎಪಿಡೆಮಿಕ್ ಡಿಸೀಸ್ ರೆಗ್ಯುಲೇಷನ್ ಆಕ್ಟ್ ಗೆ ವಿರುದ್ದ ವಾಗಿರುತ್ತೆ.
ಅ ಹಿನ್ನೆಲೆಯಲ್ಲಿ ಎಲ್ಲರೂ ಎಚ್ಚರಿಕೆ ಯಿಂದ ಇರಬೇಕು ಎಂದು ಅವರು ತಿಳಿಸಿದ್ದಾರೆ.
ಜೊತೆಗೆ ಹೊರರಾಜ್ಯದಿಂದ ಬಂದಿರುವ ಗರ್ಭಿಣಿ ಮಹಿಳೆಯರು, ಹಿರಿಯ ವ್ಯಕ್ತಿಗಳು ಹಾಗೂ ಮಕ್ಕಳ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಿ ನೆಗೆಟಿವ್ ಬಂದವರನ್ನು ಹೋಮ್ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ , ಅಂತಹ ವ್ಯಕ್ತಿಗಳು ಕೂಡಾ ತಿರುಗಾಟ ನಡೆಸಬಾರದು , ತಿರುಗಾಟ ನಡೆಸುವುದು ಗಮನಕ್ಕೆ ಬಂದರೆ ಅವರ ಮೇಲೆ ಯೂ ಇದೇ ಮಾದರಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...