Friday, June 27, 2025

ಮಾ.4-8: ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಾರ್ಷಿಕ ಜಾತ್ರೆ

ಬಂಟ್ವಾಳ: ತಾಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಮಾ.4ರಿಂದ ಮಾ. 8ರವರೆಗೆ ಬ್ರಹ್ಮಶ್ರೀ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯರ ನೇತೃತ್ವದಲ್ಲಿ ವಿವಿಧ ವೈದಿಕ,ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಮಾ. 4ರಂದು ಬೆಳಗ್ಗೆ ದ್ವಾದಶ ನಾಳಿಕೇರ ಗಣಯಾಗ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಧ್ವಜಾರೋಹಣ, ಪ್ರಸಾದ ವಿತರಣೆ, ಸಂಜೆ ಚೆಂಡು, ಮುಡ್ರಾಯಿಬೀಡಿನಿಂದ ದೈವದ ಭಂಡಾರ ಬಂದು ದೇವರ ಬಲಿ ಉತ್ಸವ, ವಿಟ್ಠಲ ನಾಯಕ್ ಅವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ.
ಮಾ.5 ರಂದು ಮಧ್ಯಾಹ್ನ ಮಹಾಪೂಜೆ, ಸಂಜೆ ಚೆಂಡು, ಭಜನೆ ಸೇವೆ, ರಾತ್ರಿ ದೇವರ ಬಲಿ ಉತ್ಸವ, ರಾಯಿ ಮಹಾಲಿಂಗೇಶ್ವರ ಯಕ್ಷಗಾನ ಕೇಂದ್ರ ಅವರಿಂದ ಭಕ್ತ ಮಾರ್ಕಂಡೇಯ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಮಾ.6ರಂದು ಮಧ್ಯಾಹ್ನ ಮಹಾಪೂಜೆ, ಸಂಜೆ ಕಡೇ ಚೆಂಡು, ಭಜನಾ ಸೇವೆ, ರಾತ್ರಿ ಭರತ ನಾಟ್ಯ, ನಡುಬಲಿ ಉತ್ಸವ, ಕಟ್ಟೆಪೂಜೆ ಮತ್ತು ಬಟ್ಟಲು ಕಾಣಿಕೆ ನಡೆಯಲಿದೆ.
ಮಾ.7ರಂದು ಬೆಳಗ್ಗೆ ಮೃತ್ಯುಂಜಯ ಹೋಮ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಉತ್ಸವ ಬಲಿ, ಭಜನಾ ಕಾರ್ಯಕ್ರಮ ನಡೆಯಲಿದೆ.
ಮಾ.8ರಂದು ಬೆಳಗ್ಗೆ ತುಲಾಭಾರ ಸೇವೆಗಳು, ಮಹಾಚೂರ್ಣೋತ್ಸವ, ಪಲ್ಲಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ ಸಾಂಸ್ಕøತಿಕ ಕಾರ್ಯಕ್ರಮ, ರಾತ್ರಿ ದೇವರು ಅವಭೃತ ಸ್ಥಾನಕ್ಕೆ ಹೊರಡುವುದು, ರಾತ್ರಿ ದರ್ಶನ ಬಲಿ, ಬಟ್ಟಲು ಕಾಣಿಕೆ, ಧ್ವಜಾವರೋಹಣ, ಧೈವಗಳಿಗೆ ನೇಮ, ಭಂಡಾರ ನಿರ್ಗಮನ.
ಮಾ.9ರಂದು ಬೆಳಗ್ಗೆ ಸಂಪೆÇ್ರೀಕ್ಷಣೆ, ಮಹಾಪೂಜೆ, ರಾತ್ರಿ ರಂಗಪೂಜೆ, ಮಹಾಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ಆಡಳಿತಾಧಿಕಾರಿ ಶ್ರೀಧರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...