ಬಂಟ್ವಾಳ: ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ತೊಡಂಬಿಲ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತಚಲಾಯಿಸಿದರು.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿ, ಬೆಳಿಗ್ಗೆ 7 ಗಂಟೆಯಿಂದಲೇ ಕೈರಂಗಳ ಬೂತ್ ನಿಂದ ತಿರುಗಾಟ ಆರಂಭಿಸಿದ್ದೇನೆ.
ದೇಶದಲ್ಲಿ ಯಾವುದೇ ಅಭಿವೃದ್ಧಿ ಆಗದ ಹಿನ್ನೆಲೆಯಲ್ಲಿ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ರೈ ಹೇಳಿದರು.