Saturday, June 28, 2025

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಾಮಾಜಿಕ ಬದುಕಿನಲ್ಲಿ ಸಂತಸ ತಂದ ಯೋಜನೆ : ಮಾಜಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ: ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ 5 ಗ್ರಾ.ಪಂ. ವ್ಯಾಪ್ತಿಯ 38 ಜನ ವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಉಪಸ್ಥಿತಿಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಾಮಾಜಿಕ ಬದುಕಿನಲ್ಲಿ ಅತ್ಯಂತ ಹೆಚ್ಚು ಮನಸ್ಸಿಗೆ ಖುಷಿ ಕೊಟ್ಟ ಕಾರ್ಯಕ್ರಮ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಲೂಕಿಗೆ ಐದು ಕುಡಿಯುವ ನೀರಿನ ಕಾಮಗಾರಿ ಯೋಜನೆ ಮಂಜೂರಾಗಿದ್ದು, 4 ಯೋಜನೆಗಳು ಪೂರ್ಣಪ್ರಮಾಣದಲ್ಲಿ ಜನತೆಯ ಉಪಯೋಗಕ್ಕೆ ಲಭ್ಯವಾಗಿರುವುದು ನನಗೆ ಅತೀವ ಸಂತಸ ತಂದಿದೆ.

ನನ್ನ ಅಧಿಕಾರವಧಿಯಲ್ಲಿ ಕಾರ್ಯಗಳನ್ನು ಯೋಜನೆಗಳನ್ನು ಕ್ಷೇತ್ರದಲ್ಲಿ ಮಂಜೂರು ಮಾಡಲು ಸಹಕರಿಸಿದಂತಹ ಹಿಂದಿನ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಧಿಕಾರಿ ವರ್ಗಕ್ಕೆ ಅವರು ಈ ಸಂದರ್ಭ ಕೃತಜ್ಞತೆ ಸಲ್ಲಿಸಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ 50 ವರ್ಷಗಳ ದೀರ್ಘಕಾಲಿಕ ದೂರದೃಷ್ಟಿ ಇರಿಸಿಕೊಂಡು ನಡೆಸಲಾಗಿದ್ದು, ಆಸುಪಾಸಿನ ಜನರ ಕುಡಿಯುವ ನೀರಿನ ಬವಣೆಯನ್ನು ನೀಗಿಸಲಿದೆ ಎಂದವರು ಹೇಳಿದರು.

ಬಂಟ್ವಾಳ ತಾಲೂಕಿನಲ್ಲಿ ಬಿಟ್ಟು ಹೋಗಿರುವ ಸಜೀಪಮುನ್ನೂರು ಗ್ರಾಮ ಪಂಚಾಯತ್ ಆಸುಪಾಸಿನ ಐದು ಗ್ರಾಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲಾಗಿದೆ ಮುಂದಿನ ಹಂತದಲ್ಲಿ ಜಾರಿಯಾಗುವುದರಿಂದ ತಾಲೂಕಿನ ಎಲ್ಲಾ ಗ್ರಾಮಗಳೂ ಕುಡಿಯುವ ನೀರಿನ ಯೋಜನೆಗೆ ಒಳಪಡಲಿದೆ ಎಂದರು.
ಈ ಸಂದರ್ಭದಲ್ಲಿ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

More from the blog

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...