ಬೆಂಗಳೂರು: ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮುಂದಿನ 3 ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.
ಇನ್ನು ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆ ಇದೆ. ಮಳೆ ಜೊತೆಗೆ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ. ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನದಲ್ಲಿ ಏರುಪೇರು ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.