Friday, January 30, 2026

ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : ದ.ಕ ಜಿಲ್ಲೆಯಲ್ಲಿ ಮುಂದಿನ 5 ದಿನ ಮಳೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ನಗರದಲ್ಲಿಂದು ಮೋಡಕವಿದ ವಾತಾವರಣ ಇರಲಿದ್ದು ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನಗಳ ಕಾಲ ಮಳೆಯಾಗಲಿದ್ದು ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದೆ ಇಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ. ಮೇ 22ರ ನಂತರ ಮಳೆಯ ತೀವ್ರತೆ ಹೆಚ್ಚಲಿದೆ. ಮೇ 23ರ ವೇಳೆಗೆ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಿಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮೊದಲ ಮೂರು ದಿನ ಸಾಧಾರಣ ಮಳೆ ಆರಂಭವಾಗಲಿದೆ. ಮುಂದಿನ ಐದು ದಿನಗಳ ಪೈಕಿ ಕೊನೆಯ ಎರಡು ದಿನ ಈ ಒಳನಾಡಿನ ಜಿಲ್ಲೆಗಳಿಗೆ ಕೊನೆಯ ಎರಡು ದಿನ ವ್ಯಾಪಕ ಮಳೆ ಬರುವ ಸಾಧ್ಯತೆ ಇದೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...