Friday, June 27, 2025

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ವಿಟ್ಲ ರೈತ ಹೋರಾಟ ಸಂಘ ನೇತೃತ್ವದಲ್ಲಿ ಚಲೋ ಸತ್ಯಾಗ್ರಹ

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ವಿಟ್ಲ ರೈತ ಹೋರಾಟ ಸಂಘ ನೇತೃತ್ವದಲ್ಲಿ 400 ಕೆ.ವಿ. ಉಡುಪಿ – ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ಮಂಗಳವಾರ ವಿಟ್ಲ ಜೈನ ಬಸದಿಯಿಂದ ನಾಡಕಛೇರಿ ಚಲೋ ಸತ್ಯಾಗ್ರಹ ನಡೆಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್. ಪಿ. ಚಂಗಪ್ಪ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ಕುಪ್ಪೆಪದವು, ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು, ವಿಟ್ಲ ರೈತ ಹೋರಾಟ ಸಮಿತಿ ಅಧ್ಯಕ್ಷ ರಾಜೀವ ಗೌಡ ಮತ್ತಿತರರು ಜಾಥಾದಲ್ಲಿ ಭಾಗವಹಿಸಿದ್ದರು. ವಿಟ್ಲ ನಾಡಕಛೇರಿ ಮುಂಭಾಗದಲ್ಲಿ ನೂರಾರು ಮಂದಿ ರೈತರು ಸತ್ಯಾಗ್ರಹ ನಡೆಸುತ್ತಿದ್ದಾರೆ. ಉನ್ನತ ಮಟ್ಟದ ಅಧಿಕಾರಿಗಳು ಬರುವ ತನಕ ಪ್ರತಿಭಟನೆ ಮುಂದುವರಿಯಲಿದೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...