ಬಂಟ್ವಾಳ : ಸತತವಾಗಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರೀ ಗಾಳಿ ಮಳೆಯ ಹಿನ್ನೆಲೆ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ .ಅವರು ತಿಳಿಸಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿ ಅಂಗನವಾಡಿಯಿಂದ 10 ನೇ ತರಗತಿವರೆಗೆ ರಜೆ ಸಾರಲಾಗಿದೆ.

ಮಳೆಯ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ರಜೆ ನೀಡುವಂತೆ ಬಂಟ್ವಾಳ ಶಿಕ್ಷಣಾಧಿಕಾರಿಯವರಿಗೆ ಸೂಚನೆ ನೀಡಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ತಿಳಿಸಿದ್ದಾರೆ.
ನೇತ್ರಾವತಿ ನೀರಿನ ಹರಿವು ಜಾಸ್ತಿಯಾಗಿದ್ದು, ಬೆಳಗ್ಗಿನ ಜಾವ , 7.7 ಮೀ ಇದ್ದು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಯೂ ತಿಳಿಸಿದ್ದಾರೆ.