*ರೆಡ್ ಅಲರ್ಟ್: ನಾಳೆ (ಆ.8) ಶಾಲಾ ಕಾಲೇಜುಗಳಿಗೆ ರಜೆ


ಬಂಟ್ವಾಳ: ಮಂಗಳೂರು ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಇದ್ದು, ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ವರೆಗೆ) ಆ.8ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.