Thursday, June 26, 2025

2 ಕೋ.ರೂ. ವೆಚ್ಚದ ನೇರಳಕಟ್ಟೆ-ನಯನಾಡು-ವೇಣೂರು ರಸ್ತೆ ಅಭಿವೃದ್ದಿ ಕಾಮಗಾರಿಗೆ ರಾಜೇಶ್ ನಾಯ್ಕ್ ಶಿಲಾನ್ಯಾಸ

ಬಂಟ್ವಾಳ : ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕುಗಳನ್ನು ಸಂಪರ್ಕಿಸುವ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ನೇರಳಕಟ್ಟೆ-ನಯನಾಡು -ವೇಣೂರು ರಸ್ತೆಗೆ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಒಂದು ಬಾರಿ ಅಭಿವೃದ್ದಿ ಯೋಜನೆಯಲ್ಲಿ 2 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನೇರಳಕಟ್ಟೆ ಜಂಕ್ಷನ್‌ನಲ್ಲಿ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು.
ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ಗುದ್ದಲಿ ಪೂಜೆ ನೆರವೇರಿಸಿದರು. ಪ್ರಕಾಶ್ ಭಟ್ ಅವರು ವಿಧಿ ವಿಧಾನ ನೆರವೇರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕಿಯೋನಿಕ್ಸ್ ಹರಿಕೃಷ್ಣ ಬಂಟ್ವಾಳ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ತಾ.ಪಂ.ಸದಸ್ಯ ರಮೇಶ್ ಕುಡ್ಮೇರು, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಉಪಾಧ್ಯಕ್ಷೆ ಲಕ್ಷ್ಮಿ ಜೆ.ಬಂಗೇರ, ಸದಸ್ಯರಾದ ಲಕ್ಷ್ಮೀ ನಾರಾಯಣ ಹೆಗ್ಡೆ, ಸರೋಜಾ ಡಿ. ಶೆಟ್ಟಿ, ಪಿಡಿಒ ರಾಜಶೇಖರ ರೈ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಇಲಾಖೆ ಕಾರ್ಯ ನಿರ್ವಾಹಕ ಅಭಿಯಂತರ ಷಣ್ಮುಗಂ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಅಮೃತ್ ಕುಮಾರ್, ಗುತ್ತಿಗೆದಾರ ಸಂತೋಷ್ ಶೆಟ್ಟಿ, ಪ್ರಮುಖರಾದ ಸುದರ್ಶನ್ ಬಜ, ರವಿ ಶಂಕರ ಹೊಳ್ಳ, ಸುಚೀಂದ್ರ ಶರ್ಮ ಕಯ್ಯಬೆ, ಮಿಥುನ್ ಪ್ರಭು, ಹರೀಶ್ ಶೆಟ್ಟಿ, ದಯಾನಂದ ಎಡ್ತೂರು,ಉಮೇಶ್ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ಜಯ ಶೆಟ್ಟಿ ನೆಕ್ಕಿತರವು, ಪುಷ್ಪರಾಜ ಶೆಟ್ಟಿ ಮತ್ತಿತರರಿದ್ದರು.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...