Tuesday, February 3, 2026

ಶಾಂತಿ, ಸೌಹಾರ್ದಯುತ ಬಂಟ್ವಾಳ ನಿರ್ಮಾಣ ಈ ಬಾರಿಗೆಯ ಗೆಲುವಿಗೆ ಕಾರಣವಾಗಿದೆ- ರಾಜೇಶ್ ನಾಯ್ಕ್

φಬಂಟ್ವಾಳ: ನಮ್ಮ ಪಕ್ಷದ ಶಾಸಕರು ಶ್ರದ್ಧೆ, ನಿಷ್ಠೆಯಿಂದ ದುಡಿದ ಪರಿಣಾಮ ಹಾಗೂ ಕಳೆದ ೫ ವರ್ಷಗಳ ಅಭಿವೃದ್ಧಿ ಕಾರ್ಯ, ಶಾಂತಿ, ಸೌಹಾರ್ದಯುತ ಬಂಟ್ವಾಳ ನಿರ್ಮಾಣ ಈ ಬಾರಿಗೆಯ ಗೆಲುವಿಗೆ ಕಾರಣವಾಗಿದೆ ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಅವರು ಗೆಲುವು ಸಾಧಿಸಿದ ಬಳಿಕ ಬಂಟ್ವಾಳ ಬಿಜೆಪಿ ಕಚೇರಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡಬೇಕಾದ ಸ್ಥಿತಿ ಇದ್ದು, ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇನೆ.

ಈ ಬಾರಿ ವಿರೋಧ ಪಕ್ಷದಲ್ಲಿದ್ದು, ಆಡಳಿತ ಪಕ್ಷದಲ್ಲಿದ್ದರೆ ಹಿಂದಿಗಿಂತ ಹೆಚ್ಚಿನ ಅಭಿವೃದ್ಧಿ ಮಾಡುವುದಕ್ಕೆ ಅವಕಾಶವಾಗುತ್ತಿತ್ತು. ಆದರೂ ಗರಿಷ್ಠ ಪ್ರಯತ್ನ ಮಾಡಿ ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಲಿದ್ದೇನೆ. ಜತೆಗೆ ಬಂಟ್ವಾಳದಲ್ಲಿ ಬಿಜೆಪಿಯಿಂದ ೨ನೇ ಬಾರಿಗೆ ಗೆದ್ದ ಮೊದಲ ಶಾಸಕನಾಗಿರುವುದಕ್ಕೆ ಹೆಚ್ಚು ಸಂತೋಷ ಪಡುತ್ತೇನೆ ಎಂದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...