Sunday, February 1, 2026

ಅನ್ನದಾನಕ್ಕಿಂತಲೂ ಶ್ರೇಷ್ಟದಾನ ರಕ್ತದಾನ: ನವೀನ್ ಕುಮಾರ್

ಹಿಂದೂ ಜನ ಸೇವಾ ಸಮಿತಿ ಬೊಂಡಾಲ, ಬೋಳಂಗಡಿ, ಲಯನ್ಸ್ ಕ್ಲಬ್ ಬಂಟ್ವಾಳ ಇವರ ಆಶ್ರಯದಲ್ಲಿ ಬ್ಲಡ್ ಬ್ಲಾಂಕ್ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಬೋಳಂಗಡಿಯಲ್ಲಿ 72 ರಕ್ತದಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.
ರಕ್ತದಾನ ಶಿಬಿರದ ಸಮಾರಂಭದ ಅಧ್ಯಕ್ಷತೆಯನ್ನು ಹಿಂದೂ ಜನ ಸೇವಾ ಸಮಿತಿಯ ಅಧ್ಯಕ್ಷರಾದ ನವೀನ್ ಕುಮಾರ್ ವಹಿಸಿದ್ದರು.
ಮುಖ್ಯ ಅತಿಥಿಯಾದ ಎಂ.ಎನ್.ಕುಮಾರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮನುಷ್ಯನಿಗೆ ಅತೀ ಹತ್ತಿರವಾದ ವಸ್ತು ರಕ್ತ. ಇದು ಜೀವ ಸಂಚಾರದ ದ್ರವ ಇದರ ದಾನ ವರ್ಗಾವಣೆಯಿಂದ ಈ ದ್ರವ ಶಾಶ್ವತವಾಗಿರುತ್ತದೆ. ಸಾವಿನ ದವಡೆಗೆ ಸಿಲುಕಿದ ವ್ಯಕ್ತಿಗೆ ನಮ್ಮಿಂದ ಜೀವದಾನವಾಗುತ್ತದೆ. ಅನ್ನದಾನ ಒಂದು ಎರಡು ಹೊತ್ತಿನ ಹಸಿವನ್ನು ಮಾತ್ರ ನೀಗಿಸಬಲ್ಲದು. ರಕ್ತದಾನ ಜೀವನದ ಉದ್ದಕ್ಕೂ ಆರೋಗ್ಯವಂತನಾಗಿ ಮಾಡುತ್ತದೆ. ಆದ್ದರಿಂದ ಎಲ್ಲಾ ದಾನಕ್ಕಿಂತಲೂ ರಕ್ತದಾನವೇ ಶ್ರೇಷ್ಟ.
ಮುಖ್ಯ ಅತಿಥಿಗಳಾದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀನಿವಾಸ ಪಜಾರಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ರಾಧಾಕೃಷ್ಣ ಬಂಟ್ವಾಳ, ಲಯನ್ಸ್ ಕ್ಲಬ್ ಕೋಶಾಧಿಕಾರಿ ದೇವಿಕಾ ದಾಮೋದರ್, ಲಯನ್ಸ್ ವಲಯಾಧ್ಯಕ್ಷರಾದ ಸುಧಾಕರ ಆಚಾರ್ಯ, ಕೆ.ಎಂ.ಸಿ. ಡಾ| ಐಶ್ವರ್ಯ ಇವರೆಲ್ಲರೂ ರಕ್ತದಾನ ಬಗ್ಗೆ ಸವಿವರವಾಗಿ ಮಾತನಾಡಿದರು. ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು, ಮೆಲ್ಕಾರ್ ಯುವ-ಸಂಗಮದ ಸದಸ್ಯರು ಉಪಸ್ಥಿತರಿದ್ದು ಹಿಂದೂ ಜನಸೇವಾ ಸಮಿತಿಯ ಸಂಚಾಲಕರಾದ ಪಿ.ಬಿ. ಗಿರಿಧರ್ ಸ್ವಾಗತಿಸಿ ಕೋಶಾಧಿಕಾರಿ ಸುಧಾಕರ್ ವಂದಿಸಿದರು. ಗುರುಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...