Monday, July 7, 2025

ಗ್ರಹಬಳಕೆಯ ವಿದ್ಯುತ್ ಬಿಲ್ ಮನ್ನಾ ಮಾಡಿ : ಮಾಜಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ: ಸಿ.ಎಂ. ಬಿ.ಎಸ್.ವೈ ಇತ್ತೀಚೆಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೊರೊನ ವೈರಸ್ ನಿಂದ ತತ್ತರಿಸಿ ಲಾಕ್ ಡೌನ್ ಆದೇಶ ಜಾರಿಯಾದ ದಿನದಿಂದ ಸಾರ್ವಜನಿಕರು ತಮ್ಮ 2 ತಿಂಗಳ ಗ್ರಹ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡುವಂತೆ ತಿಳಿಸಿದ್ದರು.

ಆದರೆ ಮೆಸ್ಕಾಂ ಇಲಾಖೆಯವರು ಮನೆಗಳ ವಿದ್ಯುತ್ ಬಿಲ್ಲಿನಲ್ಲಿ 3 ತಿಂಗಳ ವಿದ್ಯುತ್ ಬಿಲ್ಲನ್ನು ಒಟ್ಟಿಗೆ ಸೇರಿಸಿ ಪಾವತಿಸುವಂತೆ ಒತ್ತಾಯಿಸುತ್ತಿರುವುದು ಗ್ರಹ ಬಳಕೆದಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಹಾಗೂ ಇದು ತೀವ್ರ ಖಂಡನೀಯವಾಗಿದ್ದು, ಇದನ್ನು ತಕ್ಷಣ ರದ್ದುಗೊಳಿಸಿ ಕ್ರಮ ಕೈಕೊಳ್ಳುವಂತೆ ಒತ್ತಾಯಿಸುತ್ತೇನೆ. ಇದನ್ನು ಸರಿಪಡಿಸದಿದ್ದಲ್ಲಿ ತೀವ್ರ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಎಚ್ಚರಿಸಿದ್ದಾರೆ.

More from the blog

ಏಮಾಜೆ ಶಾಲೆ : ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ..

ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ...

ಬೆಂಜನಪದವು ಪ್ರೌಢಶಾಲೆ : ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ..

ಬಂಟ್ವಾಳ: ಇಂದು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ನಡೆಯಿತು. ಶಾಲಾ ಸಂಸತ್ತಿನ ಮುಖ್ಯ ಮಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಮಂತ್ರಿಗಳಿಗೆ ರಾಜ್ಯಪಾಲರು ಪ್ರಮಾಣ...

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...

ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮ..

ಮಂಗಳೂರು: ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ...