Wednesday, January 28, 2026

ಮಂಗಳೂರಿನಲ್ಲಿ ಅಂತ್ಯಸಂಸ್ಕಾರಕ್ಕೆ ವಿರೋಧ ಸರಿಯಲ್ಲ, ಪರಿಜ್ಞಾನ ಇದ್ದ ಚುನಾಯಿತ ಪ್ರತಿನಿಧಿಗಳು ಶವಸಂಸ್ಕಾರದ ಬಗ್ಗೆ ನಡೆಸಿಕೊಂಡ ರೀತಿ ಸರಿಯಲ್ಲ: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ : ಪರಿಜ್ಞಾನ ಇದ್ದ ಚುನಾಯಿತ ಪ್ರತಿನಿಧಿಗಳು ಶವ ಸಂಸ್ಕಾರದ ಬಗ್ಗೆ ನಡೆಸಿಕೊಂಡ ರೀತಿ ಸರಿಯಲ್ಲ. ವಿಶೇಷ ಸಂದರ್ಭಗಳಲ್ಲಿ ಯಾವ ಆಸ್ಪತ್ರೆಯಲ್ಲಿ ಸಾವು ಸಂಭವಿಸುತ್ತದೆಯೋ ಆ ಆಸ್ಪತ್ರೆಯ ಹತ್ತಿರದಲ್ಲಿರುವ ಚಿತಾಗಾರದಲ್ಲೇ ಶವ ಸಂಸ್ಕಾರ ನಡೆಸಬೇಕು. ಅದರಲ್ಲೂ ವಿದ್ಯುತ್ ಚಿತಾಗಾರ ಇದ್ದರೆ ಅದಕ್ಕೆ ಆದ್ಯತೆ ನೀಡಬೇಕು. ಚುನಾಯಿತ ಪ್ರತಿನಿಧಿಗಳ ಪ್ರಭಾವಕ್ಕೆ ಮಣಿದು ಪಾರ್ಥಿವ ಶರೀರಕ್ಕೆ ಅವಮಾನ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಬಿ ರಮಾನಾಥ ರೈ ತೀವ್ರ ಖೇದ ವ್ಯಕ್ತಪಡಿಸಿದ್ದಾರೆ.

ಬಿ ಸಿ ರೋಡಿನಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ವಿಶೇಷ ಸಂದರ್ಭಗಳಲ್ಲಾದರೂ ಪಾರ್ಥಿವ ಶರೀರದ ಸಂಸ್ಕಾರ ಎಲ್ಲೆಲ್ಲೋ ದಾರಿಯಲ್ಲಿ ಮಾಡಲಿಕ್ಕೆ ಬರುವುದಿಲ್ಲ. ಅಥವಾ ಯಾರೋ ಖಾಸಗಿ ಜಾಗ ನೀಡಿಯೂ ಮಾಡಲಿಕ್ಕಾಗುವುದಿಲ್ಲ. ಅದಕ್ಕೆ ಅದರದ್ದೇ ಆದ ರೀತಿ-ನಿಯಮ, ಕಾನೂನುಗಳಿರುತ್ತವೆ. ಈ ಎಲ್ಲಾ ನಿಯಮಗಳನ್ನು ಜಾರಿಗೆ ತರುವಂತದ್ದು ಜಿಲ್ಲಾಡಳಿತ. ಇದಕ್ಕೆ ಯಾರದೆ ಕಟ್ಟಪ್ಪಣೆ ಬೇಕಾಗಿಲ್ಲ. ಜಿಲ್ಲಾಡಳಿತಕ್ಕೆ ಕಾನೂನಿನ ತಿಳಿವಳಿಕೆ ಇರುತ್ತದೆ. ಅದಕ್ಕೆ ಯಾವುದೇ ವ್ಯಕ್ತಿಗಳು ಮಧ್ಯಪ್ರವೇಶ ಮಾಡುವ ಅಗತ್ಯವಿರುವುದಿಲ್ಲ. ಸಾಮಾನ್ಯ ಜನರಿಗೆ ಈ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಅಂದ ಮಾತ್ರಕ್ಕೆ ಜನಪ್ರತಿನಿಧಿಗಳೂ ಸಾಮಾನ್ಯ ಜ್ಞಾನ ಇಲ್ಲದಂತೆ ವರ್ತಿಸುವುದು ಸರಿಯಲ್ಲ. ಪಾರ್ಥಿವ ಶರೀರಕ್ಕೆ ಅದರದ್ದೇ ಆದ ಗೌರವ ಇರುತ್ತದೆ. ಅದನ್ನು ಗೌರವಿಸುವುದು ಮಾನವ ಲಕ್ಷಣ. ಅದು ಬಿಟ್ಟು ಎಲ್ಲವೂ ಗೊಂದಲಮಯ ಆದ ನಂತರ ಖಾಸಗಿ ಜಾಗ ಬೇಕಾದರೂ ನೀಡುತ್ತೇನೆ ಎನ್ನುವ ಮೂಲಕ ಗೊಂದಲಕ್ಕೆ ತೇಪೆ ಹಚ್ಚಿದರೆ ಮಣ್ಣುಪಾಲಾದ ಗೌರವ ಮರಳಿ ಬರುವುದಿಲ್ಲ ಎಂದು ರಮಾನಾಥ ರೈ ಅಸಮಾಧಾನ ವ್ಯಕ್ತಪಡಿಸಿದರು.
ಈ ಬಗ್ಗೆ ಈಗಾಗಲೇ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಚರ್ಚಿಸಲಾಗಿದೆ. ಆಗಿರುವ ಪ್ರಮಾದವನ್ನು ಜಿಲ್ಲಾಧಿಕಾರಿಗಳು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಅಚಾತುರ್ಯಗಳು ನಡೆಯಬಾರದು ಎಂಬ ಮನವಿಯನ್ನು ಡೀಸಿಗೆ ಮಾಡಲಾಗಿದೆ. ಈ ಬಗ್ಗೆ ಜಾಗರೂಕತೆ ವಹಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದರು.
ಕಾಂಗ್ರೆಸ್ ನಿಯೋಗದಲ್ಲಿ ಶಾಸಕರಾದ ಯು ಟಿ ಖಾದರ್, ಐವನ್ ಡಿ’ಸೊಜ, ಜೆ ಆರ್ ಲೋಬೋ, ಮೊಯಿದಿನ್ ಬಾವಾ, ಮಿಥುನ್ ರೈ ಮೊದಲಾದವರು ಜೊತೆಗಿದ್ದರು ಎಂದು ರೈ ಮಾಹಿತಿ ನೀಡಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...