ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿಯ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಪ್ರಕರಣದ ಕುರಿತು ಹಲವು ಸಂಶಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಂಟ್ವಾಳ ಪೊಲೀಸರು ಗಂಭೀರ ಪರಿಗಣಿಸಿದ್ದು, ಗ್ಯಾಂಗ್ ರೇಪ್ ಪ್ರಕರಣ ದಾಖಲಾಗುವ ಸಾಧ್ಯತೆಯ ಕುರಿತು ಮೂಲಗಳು ತಿಳಿಸಿದೆ. ಆರೋಪಿಗಳು ಬಾಲಕಿಯನ್ನು ಯಾವುದೋ ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಶೀಘ್ರ ಬಂಧಿಸುವ ಸಾಧ್ಯತೆ ಇದೆ. ಯಾವುದೋ ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಬ್ರಹ್ಮರಕೂಟ್ಲು ಬಳಿ ಬಿಟ್ಟು ಹೋಗಿರುವುದು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ


