Wednesday, January 28, 2026

ಮಾ.21: ರಾರಾಸಂ ಫೌಂಡೇಶನ್‌ನ ದಶ ಸಂಭ್ರಮ

ಬಂಟ್ವಾಳ: ಬಂಟ್ವಾಳ ರಾರಾಸಂ ಫೌಂಡೇಶನ್‌ನ ದಶ ಸಂಭ್ರಮ ಕಾರ್ಯಕ್ರಮ ಮಾ.21 ಆದಿತ್ಯವಾರ ಬೆಳಗ್ಗೆ 9 ರಿಂದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು ಫೌಂಡೇಶನ್ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದಶ ಸಂಭ್ರಮ ಕಾರ್ಯಕ್ರಮವನ್ನು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರು ಉದ್ಘಾಟಿಸಲಿದ್ದು, ಅತಿಥಿಗಳಾಗಿ ನಿವೃತ್ತ ಪ್ರಾಧ್ಯಾಪಕ ಬಿ.ರಾಮಚಂದ್ರ ರಾವ್, ವೈದ್ಯ ಡಾ| ಚೇತನ್‌ರಾಜ್, ಉದ್ಯಮಿ ಡಾ| ಎಸ್.ಎಂ.ಗೋಪಾಲಕೃಷ್ಣ ಆಚಾರ್ಯ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಭಾಗವಹಿಸಲಿದ್ದಾರೆ.
ಸಂಜೆ 6.30 ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಲಯನ್ಸ್ ಪ್ರಥಮ ಉಪಗವರ್ನರ್ ವಸಂತಕುಮಾರ್ ಶೆಟ್ಟಿ, ಬಳ್ಳಮಂಜ ಕ್ಷೇತ್ರದ ಡಾ| ಹರ್ಷ ಸಂಪಿಗೆತ್ತಾಯ, ಜೇಸಿಐ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಡಾ| ಅಣ್ಣಯ್ಯ ಕುಲಾಲ್, ಎಚ್ಕೆ ನಯನಾಡು ಅವರು ರಾರಾಸಂ ಗೌರವ ಪುರಸ್ಕಾರ ಪಡೆಯಲಿದ್ದು, ದಾಮೋದರ ಬಿ.ಎಂ, ಸುಧಾಕರ ಆಚಾರ್ಯ, ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸುಧಾಕರ ಸಾಲ್ಯಾನ್, ಎ.ಅಜೀಜ್ ಅವರು ಸಾಧನಾ ಪುರಸ್ಕಾರ, ಮಾ| ಸನ್ವಿತ್ ಕುಲಾಲ್, ತಕ್ಷಿಲ್ ಎಂ.ದೇವಾಡಿಗ, ಸೃಜನ್ ಪ್ರಸಾದ್ ಅವರು ಪ್ರತಿಭಾ ಪುರಸ್ಕಾರ ಪಡೆಯಲಿದ್ದಾರೆ.
ಡ್ಯಾನ್ಸ್ ಡಮಾಕಾ, ಚಿತ್ರಕಲೆ, ಛದ್ಮವೇಶ ಸೇರಿದಂತೆ ಹತ್ತಾರು ಬಗೆಯ ಸ್ಪರ್ಧೆಗಳು, ಕಾಪು ಪ್ರಶಂಸಾ ತಂಡದಿಂದ ಬಲೆ ತೆಲಿಪಾಲೆ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ.

More from the blog

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...