Monday, February 2, 2026

ರಾಯಿ ಗ್ರಾಮಕ್ಕೆ ಆಗಮಿಸಿದ ಸಾರಿಗೆ ಸುರಕ್ಷಾ ಬಸ್

ಬಂಟ್ವಾಳ: ರಾಯಿ ಗ್ರಾಮಕ್ಕೆ ಆಗಮಿಸಿದ KSRTC ಸಾರಿಗೆ ಸುರಕ್ಷಾ ಸಂಚಾರಿ ICU BUS ನ್ನು ರಾಯಿ ಗ್ರಾಮ ಪಂಚಾಯತ್ ವತಿಯಿಂದ ಸ್ವಾಗತಿಸಲಾಯಿತು.

ಜನಪ್ರೀಯ ಶಾಸಕರು  ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಇವರ ವಿಶೇಷ ಆರೋಗ್ಯ ಕಾಳಜಿಯ ಬಂಟ್ವಾಳ ತಾಲೂಕಿನ ಜನತೆಗೆ ಉತ್ಕೃಷ್ಟವಾದ ಉಚಿತ ಆರೋಗ್ಯ ಸೇವೆಯನ್ನು ರಾಯಿ ಗ್ರಾಮಸ್ಥರು ಸದುಪಯೋಗಿಸಿಕೊಂಡರು.

ಗ್ರಾಮ‌ ಪಂಚಾಯತ್ ಅಧ್ಯಕ್ಷೆ  ರತ್ನಾ ಉಪಾಧ್ಯಕ್ಷರಾದ ರಶ್ಮಿತ್ ಶೆಟ್ಟಿ ಕೈತ್ರೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು ಟಿ. ಎಲ್. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳು ಡಾ ಮನೋನ್ಮನಿ, ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ರಾಯಿ ಬೆಟ್ಟು, ರವೀಂದ್ರ ಪೂಜಾರಿ ಬದನಡಿ, ದಿನೇಶ್ ಶೆಟ್ಟಿ, ಸಂತೋಷ್ ಗೌಡ, ಗುಣವತಿ, ಪುಷ್ಪವತಿ,  ಟಾರ್ಸ್ಕ್ ಪೋರ್ಸ್ ಸದಸ್ಯರುಗಳು, ಆರೋಗ್ಯ ಸಿಬ್ಬಂದಿಗಳು, ಪಂಚಾಯತ್ ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ರಕ್ತದೊತ್ತಡ, ರಕ್ತಪರೀಕ್ಷೆ ಇನ್ನಿತರ ಸಾಮಾನ್ಯ ಪರೀಕ್ಷೆಯನ್ನು ಮಾಡಲಾಯಿತು.

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...