Monday, January 26, 2026

ರಾಯಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಹಾಶಿವರಾತ್ರಿ ಆಚರಣೆ, ಅಖಂಡ ಭಜನ ಮಂಗಲೋತ್ಸವ

ಬಂಟ್ವಾಳ: ತಾಲೂಕು ರಾಯಿ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ ಇದರ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಅಹೋರಾತ್ರಿ ಭಜನ ಮಂಗಲೋತ್ಸವ ಮತ್ತು ಏಕದಶ ರುದ್ರಾಭಿಷೇಕ ಹಾಗೂ 25 ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಗುರುವಾರ ನಡೆಯಿತು.

ಬೆಳಗ್ಗೆ ಸೂರ್ಯೋದಯಕ್ಕೆ ಭಜನ ಮಂಗಲೋತ್ಸವ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನೆ ಮೂಲಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರ.ಅರ್ಚಕ ರಾಮಚಂದ್ರ ಭಟ್ ಮತ್ತು ಶ್ರೀ ಕ್ಷೇತ್ರ ಅರಳದ ಅರ್ಚಕ ಹರೀಶ್ ಭಟ್ ಅವರು ಚಾಲನೆ ನೀಡಿದರು. ಬಳಿಕ ಗಣ ಹೋಮ, ಶ್ರೀ ಸತ್ಯ ನಾರಾಯಣ ಪೂಜೆ ನಡೆಯಿತು.

ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ ಅಧ್ಯಕ್ಷ ದಿನೇಶ್ ಭಟ್ ದೈಲ, ಗೌರವಾಧ್ಯಕ್ಷ ಹೇಮಚಂದ್ರ ಶೆಟ್ಟಿಗಾರ್, ಭಜನ ಮಂಡಳಿ ಸಂಚಾಲಕ ಸದಾನಂದ ಗೌಡ ಮತ್ತಾವು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ವಿವಿಧೆಡೆಯ 25 ತಂಡಗಳು ಭಜನ ಕಾರ್ಯಕ್ರಮ ನಡೆಸಿಕೊಟ್ಟರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...