Friday, June 27, 2025

ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕರಿಂದ ಶಿಲಾನ್ಯಾಸ ಮತ್ತು ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2 ಕೋಟಿ ರೂ. ಶಾಸಕರ ಅನುದಾನದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ಕಾರ್ಯಕ್ರಮ ಶನಿವಾರ ರಾಯಿ, ಕೊಯಿಲ ಗ್ರಾಮಗಳ ವ್ಯಾಪ್ತಿಯಲ್ಲಿ ನಡೆಯಿತು.
ದೈಲಾ-ಲಕ್ಷ್ಮೀಕೋಡಿ ರಸ್ತೆ: ಶಾಸಕರ ಅನುದಾನದ 1.53 ಕೋಟಿ ರೂ. ವೆಚ್ಚದಲ್ಲಿ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ದೈಲಾ-ಲಕ್ಷ್ಮೀಕೋಡಿವರೆಗಿನ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.
ಇಲ್ಲಿನ ತೆಂಕಾಯಿಬೊಟ್ಟು ಎಂಬಲ್ಲಿ ದೇವಸ್ಥಾನದ ಪ್ರಧಾನ ರಾಮಚಂದ್ರ ಭಟ್ ಅವರು ಧಾರ್ಮಿಕವಿಧಿ ವಿಧಾನ ನೆರವೇರಿಸಿದರು.
ಬಳಿಕ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಬಂಟ್ವಾಳ ಉಪವಿಭಾಗದಡಿ ಸುಮಾರು‌ 2 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ಕಾರ್ಯ ನಡೆಯುತ್ತಿವೆ. ಸುಮಾರು 1.53 ಕೋಟಿ ವೆಚ್ಚದಲ್ಲಿ ದೈಲಾ-ಲಕ್ಷ್ಮೀಕೋಡಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ಈ ರಸ್ತೆಯು ಸಂಪೂರ್ಣ ಕಾಂಕ್ರೀಟ್ ರಸ್ತೆಯಾಗಿದ್ದು, ಎರಡು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಅದೇ ರೀತಿ 2019-20ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಅಂದಾಜು 10 ಲಕ್ಷ ರೂ. ವೆಚ್ಚದಲ್ಲಿ ಕೊಯಿಲ ಗ್ರಾಮದ ಗುತ್ತುವಿನಿಂದ ಅಮ್ಮೇಲವರೆಗಿನ (ಪರಿಶಿಷ್ಟ ಜಾತಿ) ಕಾಂಕ್ರಿಟ್ ರಸ್ತೆ ಕಾಮಗಾರಿ ಹಾಗೂ ರಾಯಿ ಗ್ರಾಮದ ಮಾನಡ್ಕದಿಂದ ರಾಮೇರಿ ಪರಿಶಿಷ್ಟ ಪಂಗಡ ಕಾಲನಿಗೆ 10 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ,
5 ಲಕ್ಷ ರೂ. ರಾಯಿ ಗ್ರಾಮದ ರಾಯಿ ಬಜಲೋಡಿ ರಸ್ತೆ ಕಾಮಗಾರಿ, 10 ಲಕ್ಷ ರೂ. ನೀರಳಿಕೆ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನಡೆದಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ತುಂಗಪ್ಪ ಬಂಗೇರ, ರಾಯಿ ಗ್ರಾಪಂ ಅಧ್ಯಕ್ಷ ದಯಾನಂದ ಸಪಲ್ಯ, ಉಪಾಧ್ಯಕ್ಷೆ ಪುಷ್ಪಲತಾ, ಸದಸ್ಯರಾದ ಹರೀಶ್ ರಾಯಿ, ರಾಘವ ಅಮೀನ್, ಪದ್ಮನಾಭ ಗೌಡ, ಪ್ರಮುಖರಾದ ಎಂ.ಪಿ.ದಿನೇಶ್, ವಿಶ್ವನಾಥ ಗೌಡ, ಸಂತೋಷ್ ರಾಯಿಬೆಟ್ಟು, ವಸಂತ ಗೌಡ, ಪರಮೇಶ್ವರ ಪೂಜಾರಿ, ಕೃಷ್ಣ ಭಟ್, ಸಂತೋಷ್ ಗೌಡ, ಸುಂದರ ಪೂಜಾರಿ, ಚಂದ್ರಶೇಖರ ಗೌಡ, ಇಂದಿರಾ, ರಮಾನಾಥ ರಾಯಿ, ಶೀತಲ, ಸದಾನಂದ ಗೌಡ ಮತ್ತಾವು, ರಾಜೇಶ್ ಶೆಟ್ಟಿ ಹಾಜರಿದ್ದರು.

 

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...