Wednesday, February 12, 2025

ರೋಟರಿ ಟೌನ್ ವತಿಯಿಂದ ಅಂತರಾಷ್ಟ್ರೀಯ ರೆಡ್ ಕ್ರಾಸ್ ದಿನಾಚರಣೆ

ಬಂಟ್ವಾಳ : ಮಾನವೀಯತೆಯಿಂದ ಶಾಂತಿಯ ಕಡೆಗೆ ಆದರ್ಶ ಸಾರುತ್ತಿರುವ  ರೆಡ್ ಕ್ರಾಸ್ ಸಂಸ್ಥೆ ವಿಶ್ವ ಮಾನ್ಯವಾಗಿದೆ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್ ಹೇಳಿದರು.
       ಅವರು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಯ ಅಂಗವಾಗಿ ರೋಟರಿ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು . ನೊಂದವರ, ದುರ್ಬಲರ , ರೋಗಿಗಳ, ಶೋಷಿತರ, ಪ್ರಾಕೃತಿಕ ವಿಕೋಪಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಕರ ಸೇವೆಗೆ ಸಮರ್ಪಣೆ ಮಾಡಿದ ಮೇ ತಿಂಗಳ 8 ನೇ ತಾರೀಖು ಮಹತ್ವ ಪಡೆದಿದೆ ಎಂದರು.
  ವಿಶ್ವದಲ್ಲಿ ಅತೀ ಹೆಚ್ಚು ಜೀವ ಹಾನಿ ಮಾಡುವಲ್ಲಿ ಯುದ್ಧಗಳು ಕಾರಣವಾಗಿವೆ. 1863 ರಿಂದ  ಸ್ಥಾಪಕರಾದ ಹೆನ್ರಿ ಡ್ಯುನಾಂಟ್ ಆಶಯವನ್ನು ರಕ್ತ ಸಂಗ್ರಹಣ ಸೇವೆ ಮೂಲಕ  ಆರಂಭಿಸಿ ಜನಮಣ್ಣನೆ ಗಳಿಸಿದೆ.  ರೆಡ್ ಕ್ರಾಸ್ ಸಂಸ್ಥೆ ವಿಶ್ವ ದಾದ್ಯಂತ ನಿಷ್ಪಕ್ಷಪಾತ ಮತ್ತು ಏಕತೆಯಿಂದ ಸ್ವಯಂಸೇವಕರ ಮಾನವೀಯತೆಯ ತಳಹದಿಯ  ಆಧಾರದ ಮೇಲೆ ಕೆಲಸ ಮಾಡುತ್ತದೆ. ರೋಟರಿ ಸಹಭಾಗಿತ್ವ ದಲ್ಲಿ ಇಂತಹ ಭಾವನೆಗಳಿಗೆ ಧ್ವನಿ ನೀಡುವ ಕೆಲಸ ನಿರಂತರವಾಗಿರಲಿ ಎಂದರು. ಸಮಾರಂಭದಲ್ಲಿ ದಿನದ ಅದೃಷ್ಟವಂತ ಸದಸ್ಯರಾದ ಸುರೇಶ್ ಸಾಲ್ಯಾನ್ ರನ್ನು ಗೌರವಿಸಲಾಯಿತು. ಕಾರ್ಯದರ್ಶಿ ಜಯರಾಜ್ ಬಂಗೇರ ಉಪಸ್ತಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...