ಕೋವಿಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಪತ್ರಕರ್ತರನ್ನು ಪ್ಯಾಕೇಜ್ ನಲ್ಲಿ ಸೇರಿಸಿ ತಲಾ 10 ಸಾವಿರ ರೂ ನೆರವು ನೀಡಬೇಕು. ಕೋವಿಡ್ ಸೋಂಕಿನಿಂದ ಮೃತಪಟ್ಟ ಪತ್ರಕರ್ತ ಕುಟುಂಬಕ್ಕೆ ತಲಾ

5 ಲಕ್ಷ ರೂ ನೆರವು ನೀಡಬೇಕು. ಪತ್ರಿಕಾ ವಿತರಕರು ಮತ್ತು ಕೇಬಲ್ ಟಿವಿ ಆಪರೇಟರ್ಸ್ ಗಳಿಗೆ ಕೋವಿಡ್ ಲಸಿಕೆ ನೀಡಬೇಕು. ಪತ್ರಕರ್ತರ ಕುಟುಂಬ ಸದಸ್ಯರಿಗೂ ಆದ್ಯತೆ ಮೇಲೆ ಲಸಿಕೆ ಕೊಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ.
ಬೇಡಿಕೆಯ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ಯಡಿಯೂರಪ್ಪ ಅವರು ನೀಡಿದ್ದಾರೆ.
ನಿಯೋಗದಲ್ಲಿ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು,
ಪಬ್ಲಿಕ್ ಟಿವಿ ರವೀಶ್, ಟಿವಿ9 ಕಿರಣ್, ದಿಗ್ವಿಜಯ ಟಿವಿ ಮಾರುತಿ ಪಾವಗಡ ಮತ್ತಿತರರು ಇದ್ದರು.
