Saturday, January 31, 2026

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಗಣರಾಜ್ಯೋತ್ಸವ

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದಲ್ಲಿ ಗಣರಾಜ್ಯೋತ್ಸವದ ನಿಮಿತ್ತ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯಾರ್ಥಿಗಳಿಂದ ಪಥಸಂಚಲ ನಡೆಯುತು. ಪದವಿ ಪೂರ್ವ ವಿದ್ಯಾಲಯದ ಅಭಿವೃದ್ದಿ ಸಮಿತಿ ಅಧ್ಯಕ್ಷ ಸದಾಶಿವ ಬರಿಮಾರು ಧ್ವಜವನ್ನು ಮೇಲಕ್ಕೆ ಎತ್ತುವ ಮೂಲಕ ಚಾಲನೆ ನೀಡಿದರು. ಪಥಸಂಚಲನ ಮುಗಿದ ಬಳಿಕ ಎಲ್ಲಾ ವಿದ್ಯಾರ್ಥಿಗಳು ವಿದ್ಯಾಕೇಂದ್ರದದಲ್ಲಿ ಒಟ್ಟಾಗಿ ಸೇರಿ ಧ್ವಜಾರೋಹಣ ಕಾರ್‍ಯಕ್ರಮದಲ್ಲಿ ಭಾಗವಹಿಸಿದರು. ಪದವಿ ವಿದ್ಯಾಲಯದ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾಗೇಶ್‌ ಇರಾ ಅವರು ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ, ಸಹಸಂಚಾಲಕ ರಮೇಶ್‌ ಎನ್. ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರುಗಳು ಶಿಕ್ಷಕರು ಶಿಕ್ಷಕೇತರರು ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...